ಬಹಿರಂಗ ಸಮಾವೇಶ: ಬಳ್ಳಾರಿ ನಗರದಲ್ಲಿ ಮದ್ಯ ಮಾರಾಟ, ಸಾಗಣೆ ಸಂಪೂರ್ಣ ನಿಷೇಧ

ಬಹಿರಂಗ ಸಮಾವೇಶ: ಬಳ್ಳಾರಿ ನಗರದಲ್ಲಿ ಮದ್ಯ ಮಾರಾಟ, ಸಾಗಣೆ ಸಂಪೂರ್ಣ ನಿಷೇಧ Public Rally: Complete ban on liquor sale and transportation in Ballari city

ಲೋಕದರ್ಶನ ವರದಿ 

           ಬಳ್ಳಾರಿ,ಸೆ.10(ಕರ್ನಾಟಕ ವಾರ್ತೆ):ಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವತಿಯಿಂದ ಇಂದು (ಸೆಪ್ಟೆಂಬರ್ 10) ಬೃಹತ್ ಪಾದಯಾತ್ರೆಯ ಬಹಿರಂಗ ಸಮಾರೋಪ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ನಗರದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬಳ್ಳಾರಿ ನಗರದಾದ್ಯಂತ ಮದ್ಯ ಮಾರಾಟ, ಸಾಗಣೆ ಹಾಗೂ ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ನಾಗೇಂದ್ರ ಪ್ರಸಾದ್‌.ಕೆ ಅವರು ಆದೇಶ ಹೊರಡಿಸಿದ್ದಾರೆ. 

ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಅನ್ವಯ ಅಧಿಕಾರ ಚಲಾಯಿಸಿ ಈ ಆದೇಶ ಹೊರಡಿಸಿದ್ದು, ದಿನಾಂಕ ಸೆಪ್ಟೆಂಬರ್ 10 ರಂದು ಮಧ್ಯಾಹ್ನ 3 ಗಂಟೆಯಿಂದ ಸೆಪ್ಟೆಂಬರ್ 11 ರ ಮುಂಜಾನೆ 6 ಗಂಟೆಯವರೆಗೆ ಈ ನಿಬಂರ್ಧ ಜಾರಿಯಲ್ಲಿರುತ್ತದೆ. ಬಳ್ಳಾರಿ ನಗರ ವ್ಯಾಪ್ತಿಯ ಎಲ್ಲಾ ಮದ್ಯದಂಗಡಿಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ಕಡ್ಡಾಯವಾಗಿ ಮುಚ್ಚತಕ್ಕದ್ದು ಹಾಗೂ ಮದ್ಯ ಮಾರಾಟ ಮತ್ತು ಸಾಗಣೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.