ಮುಂದಗೋಡ

ಜನ ಸಂಪರ್ಕ ಸಭೆ, ಸೈಬರ್ ಅಪರಾಧಗಳ ಕುರಿತು ಜಾಗೃತಿ

ಜನ ಸಂಪರ್ಕ ಸಭೆ, ಸೈಬರ್ ಅಪರಾಧಗಳ ಕುರಿತು ಜಾಗೃತಿ

ಮುಂಡಗೋಡ 07:ತಾಲೂಕಿನ ಸಾಲಗಾಂವ ಗ್ರಾಮ ಪಂಚಾಯತ ಹಾಗೂ ಇಲ್ಲಿನ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಸಾಲಗಾಂವ ಗ್ರಾಮದಲ್ಲಿ ಜನ ಸಂಪರ್ಕ ಸಭೆ ಹಾಗೂ ಸೈಬರ್ ಅಪರಾಧಗಳ ಕುರಿತು ಸಿಪಿಐ ಬಿ.ಎಸ್‌.ಲೋಕಾಪುರ ಅವರ ಮಾರ್ಗದರ್ಶನದಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  

ಪೊಲೀಸ್ ಸಿಬ್ಬಂದಿ ಅಣ್ಣಪ್ಪ ಸೈಬರ್ ಅಪರಾಧಗಳ ಕುರಿತು ಮಾಹಿತಿ ನೀಡಿದರು. ಗ್ರಾ.ಪಂ.ಅಧ್ಯಕ್ಷ ಗಣಪತಿ ಬಾಳಮ್ಮನವರ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಪುಟ್ಟಪ್ಪ ಗುಲ್ಯಾನವರ, ಚಂದ್ರು ನಾರ್ವೇಕರ, ಗ್ರಾಮಸ್ಥರು, ರಾಜು ಗುಬ್ಬಕ್ಕನವರ ಮತ್ತು ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮಹಾಂತೇಶ ತಳವಾರ ಕಾರ್ಯಕ್ರಮ ನಿರೂಪಿಸಿದರು. 


ಸುದ್ದಿ ಓದಿ