ಪ್ರಜಾ ಸೇವಾ ಆಂದೋಲನ ಸಭೆ
ಹುಬ್ಬಳ್ಳಿ ನ.14: ಇಂದು ತಾಲೂಕು ಆಡಳಿತ ಸೌಧದ ತಹಶೀಲ್ದಾರ ಕಾರ್ಯಾಲಯದಲ್ಲಿ ಪ್ರಜಾ ಸೇವಾ ಆಂದೋಲನ ಸಭೆ ಕಾರ್ಯಕ್ರಮ ಜರುಗಿತು. ಸಾರ್ವಜನಿಕರು ವಿವಿಧ ಸಮಸ್ಯೆಗಳ ಕುರಿತು ತಮ್ಮ ಅಹವಾಲುಗಳನ್ನು ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಶಹರ ತಹಶೀಲ್ದಾರ ಮಹೇಶ ಭಗವಂತ ಗಸ್ತೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಹಾಜರಿದ್ದರು.