ಶಾಸಕರ ಅಧ್ಯಕ್ಷತೆಯಲ್ಲಿ ‘ಪ್ರಜಾ ಸೇವಾ ಕಾರ್ಯಕ್ರಮ’ : ತಹಶೀಲ್ದಾರ್ ಟಿ ಎನ್ ರಘು.
ಬ್ಯಾಡಗಿ 21 : ತಾಲೂಕಿನ ಬನ್ನಿಹಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಾಳೆ ದಿ.21 ರ (ಶನಿವಾರ) ಜನಪ್ರಿಯ ಶಾಸಕರಾದ ಬಸವರಾಜ ಶಿವಣ್ಣನವರು ಅಧ್ಯಕ್ಷತೆಯಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸುವ ‘ಪ್ರಜಾ ಸೇವಾ ಕಾರ್ಯಕ್ರಮ’ ಜರುಗಲಿದೆ ಎಂದು ತಹಶೀಲ್ದಾರ್ ಟಿಎಸ್ ರಘು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸುವ ಮೂಲಕ ಮಾತನಾಡಿದೆ ಅವರುಈ ಕಾರ್ಯಕ್ರಮದಲ್ಲಿ ಕಂದಾಯ, ಪಂಚಾಯತ್ ರಾಜ್, ಕೃಷಿ, ಆರೋಗ್ಯ, ವಿದ್ಯುತ್ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾರ್ವಜನಿಕರು ತಮ್ಮ ವೈಯಕ್ತಿಕ ಹಾಗೂ ಗ್ರಾಮದ ಮೂಲಭೂತ ಸೌಕರ್ಯಗಳಿಗೆ ಸಂಬಂಧಿಸಿದ ಅರ್ಜಿಗಳು ಮತ್ತು ಸಮಸ್ಯೆಗಳನ್ನು ನೇರವಾಗಿ ಶಾಸಕರು ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಬಹುದಾಗಿದೆ. ಆದ್ದರಿಂದ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಅವರು ಕೋರಿದ್ದಾರೆ.