ಪಿಎಸ್‌ಐ ಜೆ.ಕೆ. ಅಬ್ಬಾಸ್ ಅವರ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ
Public appreciation for PSI J.K. Abbas's humanitarian act
ಹೂವಿನಹಡಗಲಿ, ಆ. 6: ತಾಲೂಕಿನ ಇಟ್ಟಿಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆಯ ’ಆಸರೆ’ ಯೋಜನೆ ಅಡಿಯಲ್ಲಿ ಬಡವರು ಹಾಗೂ ಒಂಟಿಯಾಗಿ ಜೀವನ ಸಾಗಿಸುತ್ತಿರುವ ಮಹಿಳೆಯರ ಮನೆಗಳಿಗೆ ಭೇಟಿ ನೀಡಿ ಅವರ ಸಮಸ್ಯೆಗಳನ್ನು ಆಲಿಸಲಾಯಿತು.
ಈ ವೇಳೆ ಹಿರಿಯ ನಾಗರಿಕರು ಎದುರಿಸುತ್ತಿರುವ ಆರೋಗ್ಯ ಹಾಗೂ ಆಹಾರದ ಸಮಸ್ಯೆಯನ್ನು ಗಮನಿಸಿದ ಇಟ್ಟಿಗಿ ಪೊಲೀಸ್ ಠಾಣೆಯ ಪಿಎಸ್‌ಐ ಜೆ.ಕೆ. ಅಬ್ಬಾಸ್ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಠಾಣೆ ವ್ಯಾಪ್ತಿಯ ಸೊನ್ನ, ಮೊರಗೆರೆ, ಸೋಗಿ ಹಾಗೂ ಸೋಗಿ ತಾಂಡಾ ಗ್ರಾಮಗಳ ವಯೋವೃದ್ಧರು ಮತ್ತು ಅಗತ್ಯವಿರುವ ಕುಟುಂಬಗಳಿಗೆ ಆಹಾರ ಕಿಟ್ಗಳನ್ನು ವಿತರಿಸಿದರು.
ಪೊಲೀಸ್ ಇಲಾಖೆಯ ಎಲ್ಲಾ ಸಿಬ್ಬಂದಿ ಸಾರ್ವಜನಿಕರ ಸೇವೆಗೆ ಸದಾ ಸಿದ್ಧರಾಗಿದ್ದು, ತುರ್ತು ಪರಿಸ್ಥಿತಿ ಅಥವಾ ಯಾವುದೇ ಸಮಸ್ಯೆ ಎದುರಾದಾಗ ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪಿಎಸ್‌ಐ ಜೆ.ಕೆ. ಅಬ್ಬಾಸ್ ಸಾರ್ವಜನಿಕರಿಗೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಸಂಗಜ್ಜ, ಸುರೇಶ್ ನಾಯ್ಕ್, ಸತೀಶ ನಾಯ್ಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 