ಎಚ್‌ಐವಿ ನಿಯಂತ್ರಣಕ್ಕೆ ಜನಜಾಗೃತಿ ಅಗತ್ಯ: ಡಾ. ಬಸರೆಡ್ಡಿ
Public awareness essential for HIV control: Dr. Basareddy
ಲೋಕದರ್ಶನ ವರದಿ
ಬಳ್ಳಾರಿ. 8: ಮ್ಯಾರಥಾನ್ ಓಟವು ದೈಹಿಕ ಸಾಮರ್ಥ್ಯವನ್ನು ವೃದ್ಧಿಸುವುದರ ಜೊತೆಗೆ ಮನೋಬಲ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಯುವಜನತೆ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಸರೆಡ್ಡಿ ಕರೆ ನೀಡಿದರು.
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎಚ್‌ಐವಿ ನಿಯಂತ್ರಣ ಮತ್ತು ನಿರ್ವಹಣಾ ಘಟಕ ಹಾಗೂ ನಗರದ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಸಹಯೋಗದಲ್ಲಿ ಮಂಗಳವಾರ ನಗರದ ಇಂದಿರಾ ವೃತ್ತದಲ್ಲಿ ಆಯೋಜಿಸಿದ್ದ ಎಚ್‌ಐವಿ ಜಾಗೃತಿ ಮ್ಯಾರಥಾನ್ಗೆ ಚಾಲನೆ ನೀಡಿ ಅವರು ಮಾತನಾಡಿದರು.
ಓಟ ಆರೊಗ್ಯಕ್ಕೆ - ನಡಿಗೆಗೆ ಎಚ್‌ಐವಿ ನಿಯಂತ್ರಣಕ್ಕೆ’ ಎಂಬ ಧ್ಯೇಯವಾಕ್ಯದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಸಮಾಜದಲ್ಲಿ ಎಚ್‌ಐವಿ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸುವುದು ಇಂದಿನ ಅಗತ್ಯವಾಗಿದೆ ಎಂದು ಹೇಳಿದರು.
ಜಿಲ್ಲಾ ಎಚ್‌ಐವಿ ನಿಯಂತ್ರಣಾಧಿಕಾರಿ ಡಾ. ಇಂದಿರಾಣಿ ಮಾತನಾಡಿ, ಎಚ್‌ಐವಿ ನಿಯಂತ್ರಣದಲ್ಲಿ ಸಾರ್ವಜನಿಕ ಜಾಗೃತಿ ಮಹತ್ವದ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಜೀವನಶೈಲಿ ರೂಢಿಸಿಕೊಳ್ಳಬೇಕು ಹಾಗೂ ಸೋಂಕುಗಳಿಂದ ದೂರವಿರಲು ತಮ್ಮ ನಡವಳಿಕೆಯಲ್ಲಿ ಸಕಾರಾತ್ಮಕ ಬದಲಾವಣೆ ತಂದುಕೊಳ್ಳಬೇಕು ಎಂದು ಸಲಹೆ ನೀಡಿದರು.
ನಗರದ ವಿವಿಧ ಪದವಿ, ಪಿಯುಸಿ ಹಾಗೂ ಡಿಪ್ಲೊಮಾ ಕಾಲೇಜುಗಳ 200ಕ್ಕೂ ಅಧಿಕ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು. ವಿಜೇತರಿಗೆ ಕ್ರಮವಾಗಿ 5,000, 3,500 ಹಾಗೂ 2,500 ನಗದು ಬಹುಮಾನ ಮತ್ತು ಪಾರಿತೋಷಕ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಡ್ಯಾಪ್ಕು, ಐಸಿಟಿಸಿ, ಮೊಬೈಲ್ ಐಸಿಟಿಸಿ, ಡಿಎಸ್‌ಆರ್ಸಿ, ಎಆರ್ಟಿ, ಎಸ್‌ಎಸ್ಕೆ, ವಿಮುಕ್ತಿ, ಸೌಖ್ಯ, ಬೆಳಕು ಸಮುದಾಯ ಸೇವಾ ಸಂಸ್ಥೆ, ನಿತ್ಯ ಜೀವನ ಹಾಗೂ ಎಫ್ಪಿಎಐ ಸಂಸ್ಥೆಗಳ ಪ್ರತಿನಿಧಿಗಳು, ರಕ್ತಕೇಂದ್ರದ ಸಿಬ್ಬಂದಿ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 