ವಿಜಯಪುರ

ಮನಗೂಳಿಯಲ್ಲಿ 371(ಜೆ) ಮೀಸಲಾತಿ ಹೋರಾಟ ಜನಜಾಗೃತಿ ಸಭೆ

ಮನಗೂಳಿಯಲ್ಲಿ 371(ಜೆ) ಮೀಸಲಾತಿ ಹೋರಾಟ ಜನಜಾಗೃತಿ ಸಭೆ

            ವಿಜಯಪುರ 27  : ವಿಜಯಪುರ ಜಿಲ್ಲಾ 371(ಜೆ) ಹೋರಾಟ ಸಮಿತಿಯಿಂದ ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿಗೆ ಆಗ್ರಹಿಸಿ ಡಿಸೆಂಬರ್ 1ರಿಂದ ನಡೆಯಲಿರುವ ಹೋರಾಟದ ಕುರಿತು ಜನಜಾಗೃತಿ ಸಭೆ ಹಮ್ಮಿಕೊಳ್ಳಲಾಗಿತ್ತು. ವಿಜಯಪುರ ಜಿಲ್ಲಾ 371(ಜೆ) ಹೋರಾಟ ಸಮಿತಿಯ ಮುಖಂಡ ಲಾಯಪ್ಪ ಇಂಗಳೆ ಅವರು ಮಾತನಾಡಿ ಹೈದ್ರಾಬಾದ್ ಕರ್ನಾಟಕ ಪ್ರದೇಶಕ್ಕೆ ಮೀಸಲಾತಿ ಜಾರಿ ಮಾಡುವಾಗ ವಿಜಯಪುರ ಜಿಲ್ಲೆಯನ್ನು ಕೈ ಬಿಟ್ಟಿದ್ದರಿಂದ ಜಿಲ್ಲೆಯ ಜನರಿಗೆ ದೊಡ್ಡ ಅನ್ಯಾಯವಾಗಿದೆ.

             ವಿಜಯಪುರ ಜಿಲ್ಲೆಗೆ ಮೀಸಲಾತಿ ಕಲ್ಪಿಸಲು ನಡೆಯುತ್ತಿರುವ ಹೋರಾಟಕ್ಕೆ ಸಾರ್ವಜನಿಕರು ಹಾಗೂ ಸಂಘ -ಸಂಸ್ಥೆಗಳ ಮುಖಂಡರು ಬೆಂಬಲಿಸಬೇಕೆಂದು ಮನವಿ ಮಾಡಿದರು.ವಿಜಯಪುರ ಜಿಲ್ಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯ ಯುವಕರಿಗೆ ಸರಕಾರಿ ನೇಮಕಾತಿಯಲ್ಲಿ ಮೀಸಲಾತಿ,ಕಲ್ಯಾಣ ಕರ್ನಾಟಕ ಭಾಗಕ್ಕೆ ಸಿಗುವ ವಿಶೇಷ ಅನುದಾನ ಸೌಲಭ್ಯ ಸೇರಿದಂತೆ ಜಿಲ್ಲೆಯ 25 ಲಕ್ಷ ಜನರ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಸಂವಿಧಾನದ 371(ಜೆ) ಗೆ ತಿದ್ದುಪಡಿ ಮಾಡಿ ವಿಜಯಪುರ  ಜಿಲ್ಲೆಯನ್ನು ಮೀಸಲಾತಿಯಡಿ ಸೇರಿಸುವುದು ಅತ್ಯಂತ ಅವಶ್ಯಕವಾಗಿದೆ, ಜಿಲ್ಲೆಯ ಸಮಸ್ತ ಜನರ ಪರವಾಗಿ ನಡೆಯುತ್ತಿರುವ ಹೋರಾಟಕ್ಕೆ ಪ್ರತಿಯೊಬ್ಬರು ಬೆಂಬಲಿಸಬೇಕೆಂದು ಮನವಿ ಮಾಡಿದರು. 

                     ಗ್ರಾಮದ ಹಿರಿಯ ಮುಖಂಡರಾದ ಅರವಿಂದ ಕಟಾವಿ ಅವರು ಮಾತನಾಡಿ ವಿಜಯಪುರ ಜಿಲ್ಲೆಯು ಹೈದ್ರಾಬಾದ್ ಸಂಸ್ಥಾನದ ಆಡಳಿತಕ್ಕೆ ಒಳಪತ್ತಿತ್ತು, ಡಾ ಡಿ ಎಂ ನಂಜುಂಡಪ್ಪ ವರದಿಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳು ಅತ್ಯಂತ ಹಿಂದುಳಿದ ತಾಲೂಕುಗಳೆಂದ ದಾಖಲಾಗಿದೆ ಹೀಗಿದ್ದರೂ ಕೂಡಾ ಜಿಲ್ಲೆಯನ್ನು 371ಜೆ ಮೀಸಲಾತಿಯಿಂದ ಕೈ ಬಿಟ್ಟಿದ್ದಕ್ಕೆ ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಗಿದೆ, ಜಿಲ್ಲೆಯು ಅಭಿವೃದ್ಧಿಗೆ  371ಜೆ ಮೀಸಲಾತಿಯು ಅತ್ಯಂತ ಅವಶ್ಯಕವಾಗಿದೆ ವಿಜಯಪುರ ಜಿಲ್ಲಾ 371 ಜೆ ಹೋರಾಟ ಸಮಿತಿಯು ನಡೆಸುತ್ತಿರುವ ಜನಪರ ಹೋರಾಟಕ್ಕೆ ಜಿಲ್ಲೆಯ ಸಮಸ್ತ ಜನ ಕೈಜೋಡಿಸಬೇಕೆಂದು ಮನವಿ ಮಾಡಿದರು. 


ಸುದ್ದಿ ಓದಿ