ಸೊಳ್ಳೆ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಜಿಲ್ಲಾ ಕೀಟಶಾಸ್ತ್ರಜ್ಞೆ ನಂದಿನಿ
Public cooperation essential for mosquito control: District Entomologist Nandini
ಬಳ್ಳಾರಿ 20: ಸಮುದಾಯಗಳಲ್ಲಿ ಸೊಳ್ಳೆ ನಿಯಂತ್ರಣ ಹಾಗೂ ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗೆ ಸಾರ್ವಜನಿಕರ ಸಹಕಾರ ಅತ್ಯಂತ ಅಗತ್ಯವಾಗಿದೆ ಎಂದು ಜಿಲ್ಲಾ ಕೀಟಶಾಸ್ತ್ರಜ್ಞೆ ನಂದಿನಿ ಹೇಳಿದರು.
ಡೆಂಗ್ಯೂ ನಿಯಂತ್ರಣ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬಂಡಿಹಟ್ಟಿ ಸರ್ಕಾರಿ ಹಾಸ್ಟೆಲ್ನಲ್ಲಿ ಶುಕ್ರವಾರ ಶಾಲಾ ಮಕ್ಕಳಿಗಾಗಿ ಆಯೋಜಿಸಿದ್ದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಡೆಂಗ್ಯೂ ರೋಗವು ಈಡಿಸ್ ಈಜಿಪ್ಟೈ ಎಂಬ ಸೋಂಕಿತ ಸೊಳ್ಳೆ ಕಚ್ಚುವುದರಿಂದ ಹರಡುತ್ತದೆ.
ಮಳೆಗಾಲದಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮನೆಗಳ ಒಳಗೆ ಹಾಗೂ ಹೊರಭಾಗದಲ್ಲಿ ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸಬೇಕು. ನಿಂತ ನೀರಿನಲ್ಲಿ ಈಡಿಸ್ ಸೊಳ್ಳೆಗಳ ಲಾರ್ವಾ ಉತ್ಪತ್ತಿಯಾಗುವುದನ್ನು ತಡೆಯಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ನಿಂತ ನೀರಿನಿಂದ ಡೆಂಗ್ಯೂ ಮಾತ್ರವಲ್ಲದೆ ಚಿಕೂನ್ಗುನ್ಯಾ, ಮಲೇರಿಯಾ, ಆನೆಕಾಲು ರೋಗ ಹಾಗೂ ಮೆದುಳು ಜ್ವರದಂತಹ ಮಾರಕ ರೋಗಗಳು ಹರಡುವ ಸಾಧ್ಯತೆ ಇದೆ. ಸಾಮಾನ್ಯ ಜ್ವರ ಎಂದು ನಿರ್ಲಕ್ಷ್ಯ ಮಾಡದೆ, ಮೂರು ದಿನಗಳಿಗಿಂತ ಹೆಚ್ಚು ಕಾಲ ಜ್ವರ, ತೀವ್ರ ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸಖಂಡ ಹಾಗೂ ಕೀಲು ನೋವು ಕಂಡುಬಂದರೆ ತಕ್ಷಣವೇ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 