ದೇವಾಲಯಗಳ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯ: ಶಾಸಕ ಬಾಬಾಸಾಹೇಬ ಪಾಟೀಲ

ದೇವಾಲಯಗಳ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯ: ಶಾಸಕ ಬಾಬಾಸಾಹೇಬ ಪಾಟೀಲ  Public cooperation is essential for the development of temples: MLA Babasaheb Patil


ನೇಸರಗಿ 16: ಸರ್ಕಾರ ದೇವಾಲಯಗಳ ಅಭಿವೃದ್ಧಿಗೆ ನೀಡುವ ಅನುದಾನದ ಜೊತೆಗೆ ಸಾರ್ವಜನಿಕರು ಕೈಜೋಡಿಸಿ ತನು, ಮನ, ಧನದ ಸಹಾಯದೊಂದಿಗೆ ದೇವಾಲಯಗಳ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.  

ಸಮೀಪದ ದೇಶನೂರ ಗ್ರಾಮದಲ್ಲಿ ಬುಧವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. 7.51 ಲಕ್ಷ ಅನುದಾನದಲ್ಲಿ ಗಣೇಶ ದೇವಸ್ಥಾನದ ಬಳಿ ಗಜಾನನ ಸೇವಾ ಮಂಡಳ ಟ್ರಸ್ಟ್ನ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಬಸವೇಶ್ವರ ದೇವಸ್ಥಾನದ ಆವರಣದಲ್ಲಿ 10 ಲಕ್ಷ ಅನುದಾನದಲ್ಲಿ ಕಲ್ಯಾಣ ಮಂಟಪ ನಿರ್ಮಾಣ ಕಾಮಗಾರಿಗೂ ಭೂಮಿಪೂಜೆ ನೆರವೇರಿಸಿದರು.  

ಶಾಸಕರ ಅನುದಾನದಲ್ಲಿ ನೂತನ ಬಸ್ ನಿಲ್ದಾಣ ಉದ್ಘಾಟಿಸಿದರು. ಅಲ್ಪಸಂಖ್ಯಾತರ ಕಲ್ಯಾಣ ನಿಧಿಯ ಅನುದಾನದಲ್ಲಿ ನೂತನ ವಾಹನ ವಿತರಿಸಲಾಯಿತು. ದೇವಾಲಯ, ರಸ್ತೆ, ಶಾಲೆ, ಕಾಲುವೆ, ನೀರು, ಚರಂಡಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಮುಂದೆಯೂ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುವುದಾಗಿ ಬಾಬಾಸಾಹೇಬ ಪಾಟೀಲ ತಿಳಿಸಿದರು.  

ಈ ಸಂದರ್ಭದಲ್ಲಿ ದೀಪಕ ಪಾಟೀಲ, ಸಚಿನ ಪಾಟೀಲ, ಶಿವನಗೌಡ ಪಾಟೀಲ, ಅಣ್ಣಪ್ಪ ಕಡಕೋಳ, ಡಾ. ಮಲ್ಲಿಕಾರ್ಜುನ ಹರಕುನಿ, ಮೋಹನ ಹಜೇರಿ, ಶಿವಾನಂದ ಪಟ್ಟಣಶೆಟ್ಟಿ ಸೇರಿದಂತೆ ಗ್ರಾಮಸ್ಥರು, ಮುಖಂಡರು ಹಾಗೂ ಮಹಿಳೆಯರು ಉಪಸ್ಥಿತರಿದ್ದರು.