ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಜನರ ಸಹಕಾರ ಅಗತ್ಯ: ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಬಿ. ಕಂಡಕೂರ್
Public cooperation is essential for the special revision of the electoral roll: Taluk SVEEP Committe
ರೋಣ 03: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯನ್ನು ಪರಿಣಾಮಕಾರಿಯಾಗಿ ನಡೆಸಲು ಸಾರ್ವಜನಿಕರ ಸಹಕಾರ ಅತ್ಯವಶ್ಯಕ ಎಂದು ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಬಿ. ಕಂಡಕೂರ್ ತಿಳಿಸಿದ್ದಾರೆ. ರೋಣ ಪಟ್ಟಣದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬ ಅರ್ಹ ನಾಗರಿಕನೂ ಮತದಾರರ ಪಟ್ಟಿಯಲ್ಲಿ ತನ್ನ ಹೆಸರು ಸರಿಯಾಗಿ ದಾಖಲಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದರು. ಮತದಾರರ ಪಟ್ಟಿಯ ನಿಖರತೆ ಪ್ರಜಾಪ್ರಭುತ್ವದ ಬಲವರ್ಧನೆಗೆ ಪ್ರಮುಖವಾಗಿದೆ ಎಂದು ಅವರು ಒತ್ತಿ ಹೇಳಿದರು.
ಜೂನ್ 30ರಿಂದ ಜುಲೈ 29ರವರೆಗೆ ನಡೆಯುತ್ತಿರುವ ಈ ವಿಶೇಷ ಪರಿಷ್ಕರಣೆ ಸಂದರ್ಭದಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಿ ಮತದಾರರ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ. ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ನೀಡುವ ಮೂಲಕ ಸಹಕರಿಸಬೇಕು ಎಂದು ತಿಳಿಸಲಾಯಿತು. ಹೆಸರು ಸೇರೆ್ಡ, ತಿದ್ದುಪಡಿ, ವಿಳಾಸ ಬದಲಾವಣೆ ಹಾಗೂ ಹೆಸರು ತೆಗೆದುಹಾಕುವಂತಹ ಕಾರ್ಯಗಳನ್ನು ಸರಿಯಾದ ರೀತಿಯಲ್ಲಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. 18 ವರ್ಷ ಪೂರ್ಣಗೊಂಡ ಯುವಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರೆ್ಡಗೊಳ್ಳುವಂತೆ ವಿಶೇಷವಾಗಿ ಮನವಿ ಮಾಡಲಾಗಿದೆ.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಹಾಗೂ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸ್ವೀಪ್ ಸಮಿತಿ ಸದಸ್ಯರು ಭಾಗವಹಿಸಿದ್ದರು. ಮತದಾರ ಜಾಗೃತಿ ಘೋಷಣೆಗಳನ್ನು ಕೂಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು. ಅಧಿಕಾರಿಗಳು ಮತದಾರರ ಹಕ್ಕು ಹಾಗೂ ಜವಾಬ್ದಾರಿಗಳ ಕುರಿತು ನಿರಂತರ ಜಾಗೃತಿ ಅಗತ್ಯವಿದೆ ಎಂದು ತಿಳಿಸಿದರು. ಮತದಾರರ ಪಟ್ಟಿಯ ಶುದ್ಧತೆ ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆಗೆ ಮೂಲಭೂತವಾಗಿದ್ದು, ಎಲ್ಲರೂ ಸಹಕರಿಸಬೇಕು ಎಂದು ಅವರು ಕರೆ ನೀಡಿದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 