ಮಹಲಿಂಗಪುರ

ಎಪಿಎಂಸಿ ಚರಂಡಿಗೆ ಶಾಶ್ವತ ಪರಿಹಾರಕ್ಕೆ ಸಾರ್ವಜನಿಕರ ಒತ್ತಾಯ

ಎಪಿಎಂಸಿ ಚರಂಡಿಗೆ ಶಾಶ್ವತ ಪರಿಹಾರಕ್ಕೆ ಸಾರ್ವಜನಿಕರ ಒತ್ತಾಯ

ಮಹಾಲಿಂಗಪುರ: ಎಪಿಎಂಸಿ ಪ್ರವೇಶ ದ್ವಾರದ ಬಳಿ ಹಲವು ದಿನಗಳಿಂದ ಚರಂಡಿ ನೀರು ರಸ್ತೆ ಮೇಲೆ ಹರಿದು ಕಸ, ದುರ್ವಾಸನೆ ಹಾಗೂ ಸಂಚಾರ ಸಮಸ್ಯೆ ಉಂಟಾಗಿತ್ತು. ಈ ಕುರಿತು ಪ್ರಕಟವಾದ ವರದಿ ಬಳಿಕ ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಸ್ವಚ್ಛತಾ ಕಾರ್ಯ ಕೈಗೊಂಡರು.

ಚರಂಡಿಯಲ್ಲಿದ್ದ ಹೂಳು, ಕಸ, ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಗಿಡಗಂಟಿಗಳನ್ನು ಯಂತ್ರೋಪಕರಣಗಳ ನೆರವಿನಿಂದ ತೆರವುಗೊಳಿಸಿದ ಪರಿಣಾಮ ರಸ್ತೆ ಮೇಲೆ ನಿಂತಿದ್ದ ನೀರು ಸರಾಗವಾಗಿ ಹರಿಯಲು ಆರಂಭವಾಗಿದೆ. ಇದರಿಂದ ರೈತರು, ವ್ಯಾಪಾರಿಗಳು ಹಾಗೂ ಸಾರ್ವಜನಿಕರಿಗೆ ನೆಮ್ಮದಿ ದೊರೆತಿದೆ.

ಎಪಿಎಂಸಿ ಆವರಣಕ್ಕೆ ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಜನರು ಹಾಗೂ ವಾಹನಗಳು ಆಗಮಿಸುವ ಹಿನ್ನೆಲೆಯಲ್ಲಿ ಚರಂಡಿ ನಿರ್ವಹಣೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಜೊತೆಗೆ ಮಳೆಗಾಲದಲ್ಲಿ ಸಮಸ್ಯೆ ಮರುಕಳಿಸದಂತೆ ನಿಯಮಿತವಾಗಿ ಚರಂಡಿ ಸ್ವಚ್ಛತಾ ಕಾರ್ಯ ನಡೆಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಸುದ್ದಿ ಓದಿ