ಅರ್ಧಕ್ಕೆ ನಿಂತ ಚರಂಡಿ ಕಾಮಗಾರಿ ಸಾರ್ವಜನಿಕರು ಹೈರಾಣು
Public is worried about the unfinished sewerage work
ಲೋಕದರ್ಶನ ವರದಿ
ಸವದತ್ತಿ 21: ನಗರದ ಅತ್ಯಂತ ಜನನಿಬಿಡ ಪ್ರದೇಶವಾದ ಬಸ್ ನಿಲ್ದಾಣದ ರಸ್ತೆಯಲ್ಲಿ ಕೈಗೆತ್ತಿಕೊಂಡಿರುವ ಚರಂಡಿ ಕಾಮಗಾರಿಯು ಕಳೆದ ಹಲವು ದಿನಗಳಿಂದ ಅರ್ಧಕ್ಕೆ ಸ್ಥಗಿತಗೊಂಡಿದ್ದು, ಇದರಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ.
ಬಸ್ ನಿಲ್ದಾಣಕ್ಕೆ ಹೋಗುವ ಈ ಮುಖ್ಯ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಪಕ್ಕದಲ್ಲಿ ಚರಂಡಿಗಾಗಿ ಗುಂಡಿ ತೋಡಿ ಹಾಗೆಯೇ ಬಿಟ್ಟಿರುವುದರಿಂದ ರಸ್ತೆ ಕಿರಿದಾಗಿದ್ದು, ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ವ್ಯಾಪಾರಸ್ಥರಿಗೆ ಮತ್ತು ಪಾದಚಾರಿಗಳಿಗೆ ಓಡಾಡಲು ಜಾಗವಿಲ್ಲದಂತಾಗಿದ್ದು, ಧೂಳಿನ ಸಮಸ್ಯೆಯಿಂದ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ಇದೇ ಮಾರ್ಗವಾಗಿ ನಿತ್ಯ ಹಲವಾರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಓಡಾಡುತ್ತಿದ್ದಾರೆ.
ಸಾರ್ವಜನಿಕರ ಸಮಸ್ಯೆ ಕಣ್ಣಿಗೆ ಕಾಣುತ್ತಿದ್ದರೂ ಸಹ, ಕಾಮಗಾರಿಯನ್ನು ಪೂರ್ಣಗೊಳಿಸಲು ಯಾರೂ ಆಸಕ್ತಿ ತೋರುತ್ತಿಲ್ಲ ಎಂಬುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಅರ್ಧಕ್ಕೆ ನಿಂತಿರುವ ಈ ಕೆಲಸದಿಂದಾಗಿ ಅಪಘಾತಗಳು ಸಂಭವಿಸುವ ಭೀತಿ ಇದೆ. ಅಧಿಕಾರಿಗಳು ಮತ್ತು ಕೂಡಲೇ ಎಚ್ಚೆತ್ತುಕೊಂಡು ಈ ಕಾಮಗಾರಿಯನ್ನು ಪೂರ್ಣಗೊಳಿಸಬೇಕು.
ಸ್ಥಗಿತಗೊಂಡಿರುವ ಚರಂಡಿ ಕಾಮಗಾರಿಯನ್ನು ತಕ್ಷಣವೇ ಪುನಃ ಆರಂಭಿಸಬೇಕು. ಟ್ರಾಫಿಕ್ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಮಳೆಗಾಲ ಆರಂಭವಾಗುವ ಮುನ್ನವೇ ವೈಜ್ಞಾನಿಕವಾಗಿ ಚರಂಡಿ ವ್ಯವಸ್ಥೆ ಸರಿಪಡಿಸಬೇಕು.ನಗರಸಭೆ ಅಧಿಕಾರಿಗಳು ಮತ್ತು ಈ ಕೂಡಲೇ ಗಮನಹರಿಸಿ, ಜನಸಾಮಾನ್ಯರ ಕಿರಿಕಿರಿಯನ್ನು ತಪ್ಪಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 