ಬೆಳಗಾವಿಯಲ್ಲಿ ‘ಜಿನ ದೀವಿಗೆ’ ಮತ್ತು ‘ಮರಾಠಿಯೊಳಗೊಂದು ಕನ್ನಡ ಗತವೈಭವ’ ಕೃತಿಗಳ ಲೋಕಾರ್ಪಣೆ ಸಮಾರಂಭ
ಬೆಳಗಾವಿ ೨೬: ರಂಗಸೃಷ್ಟಿ ಸಾಂಸ್ಕೃತಿಕ ಸಂಘ (ರಿ), ಬೆಳಗಾವಿ ವತಿಯಿಂದ ಡಾ. ಪಿ. ಜಿ. ಕೆಂಪಣ್ಣವರ ಅವರ ‘ಜಿನ ದೀವಿಗೆ’ ಹಾಗೂ ಶಿರೀಷ ಜೋಶಿ ಅವರ ‘ಮರಾಠಿಯೊಳಗೊಂದು ಕನ್ನಡ ಗತವೈಭವ’ ಕೃತಿಗಳ ಲೋಕಾರ್ಪಣೆ ಸಮಾರಂಭ ಆಯೋಜಿಸಲಾಗಿದೆ.
ಕಾರ್ಯಕ್ರಮ ಜೂನ್ ೨೭, ೨೦೨೬, ಶನಿವಾರ ಇಳಿಹೊತ್ತು ೪:೩೦ ಕ್ಕೆ ರಾಣಿಚೆನ್ನಮ್ಮ ವೃತ್ತದಲ್ಲಿರುವ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯಲಿದೆ.ಹಿರಿಯ ಸಾಹಿತಿಗಳಾದ ಡಾ. ಬಸವರಾಜ ಜಗಜಂಪಿ ಮತ್ತು ಎಲ್. ಎಸ್. ಶಾಸ್ತ್ರಿ ಅವರು ಕೃತಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಹಿರಿಯ ಲೇಖಕಿ ಡಾ. ಗುರುದೇವಿ ಹುಲೆಪ್ಪನವರಮಠ ಮತ್ತು ಪ್ರಾಧ್ಯಾಪಕರಾದ ಡಾ. ಎಚ್. ಬಿ. ಕೋಲ್ಕಾರ ಅವರು ಕೃತಿಗಳ ಕುರಿತು ಮಾತನಾಡಲಿದ್ದಾರೆ.ರಂಗಸೃಷ್ಟಿ ಸಾಂಸ್ಕೃತಿಕ ಸಂಘದ ಅಧ್ಯಕ್ಷ ರಮೇಶ ಜಂಗಲ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಉಪಾಧ್ಯಕ್ಷರಾದ ಎಂ.ಕೆ.ಹೆಗಡೆ ಹಾಗೂ ಶೈಲಜಾ ಭಿಂಗೆ, ಕೋಶಾಧಿಕಾರಿ ಶಾಂತಾ ಆಚಾರ್ಯ ಮತ್ತು ಕಾರ್ಯದರ್ಶಿ ಶರಣಗೌಡ ಪಾಟೀಲ ಅವರು ಕೋರಿದ್ದಾರೆ.