ಇಂದು ಪ್ರಜಾಸೇವೆ ಆಂದೋಲನ ಸಭೆ
ಯರಗಟ್ಟಿ 16 : ರಾಜ್ಯ ಸರ್ಕಾರದ ಸೂಚನೆಯನ್ವಯ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಸೂಕ್ತ ಪರಿಹಾರ ನೀಡುವ ಉದ್ದೇಶದಿಂದ ಅ.17 ರಂದು ಶನಿವಾರ ಯರಗಟ್ಟಿ ತಾಲೂಕಿನ ಯರರ್ಝವಿ ಗ್ರಾಮದ ದ್ಯಾಮಮ್ಮದೇವಿ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 11.00 ಗಂಟೆಗೆ ಶಾಸಕ ವಿಶ್ವಾಸ ವೈದ್ಯ ಅಧ್ಯಕ್ಷತೆಯಲ್ಲಿ ಯರರ್ಝವಿ ಗ್ರಾಮ ಪಂಚಾಯತ ಮಟ್ಟದ "ಪ್ರಜಾಸೇವೆ ಆಂದೋಲನ ಸಭೆ"ಯನ್ನು ನಿಗದಿ ಪಡಿಸಲಾಗಿದೆ.
ಸಭೆಯಲ್ಲಿ ತಹಶೀಲ್ದಾರ ಎಂ ವ್ಹಿ ಗುಂಡಪ್ಪಗೋಳ, ತಾ.ಪಂ. ಇಓ ಬಸವರಾಜ ಅಯ್ಯನಗೌಡರ, ಸೇರಿದಂತೆ ತಾಲೂಕಾ ಮಟ್ಟದ ಅಧಿಕಾರಿಗಳು ಆಗಮಿಸಲಿದ್ದಾರೆ. ಯರಗಟ್ಟಿ ತಾಲೂಕಿನ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲು ಸಲ್ಲಿಸಿ ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಹಾಗೂ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೋಳ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.