ವಿಜಯಪುರ

ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನದಲ್ಲಿ ಸಾರ್ವಜನಿಕರು ಭಾಗವಹಿಸಿ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ

ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನದಲ್ಲಿ ಸಾರ್ವಜನಿಕರು ಭಾಗವಹಿಸಿ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ

ಬೀದರ್, ಜು. 5: ಮತದಾನದ ಹಕ್ಕು ಪ್ರತಿಯೊಬ್ಬ ಭಾರತೀಯ ಪ್ರಜೆಯ ಅಮೂಲ್ಯ ಸಾಂವಿಧಾನಿಕ ಹಕ್ಕಾಗಿದ್ದು, ಈ ಹಕ್ಕಿನ ಸಂರಕ್ಷಣೆ ಹಾಗೂ ನಿಖರ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಉದ್ದೇಶದಿಂದ ಭಾರತ ಚುನಾವಣಾ ಆಯೋಗ ಕೈಗೊಂಡಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನದಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿ ಡಾ. ಶೈಲೇಂದ್ರ ಬೆಲ್ದಾಳೆ ಕರೆ ನೀಡಿದರು. ಬೀದರ್ ದಕ್ಷಿಣ ಕ್ಷೇತ್ರದ ಚಿಟ್ಟಾವಾಡಿ ಗ್ರಾಮದ 61ನೇ ಮತಗಟ್ಟೆಯಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.  

ಈ ಅಭಿಯಾನದಡಿ ಮತದಾರರ ಪಟ್ಟಿಯಲ್ಲಿರುವ ಹೆಸರು, ವಿಳಾಸ, ವಯಸ್ಸು ಸೇರಿದಂತೆ ಇತರ ವಿವರಗಳನ್ನು ಪರೀಶೀಲಿಸಿ, ಅಗತ್ಯವಿದ್ದಲ್ಲಿ ತಿದ್ದುಪಡಿ ಮಾಡಿಸಿಕೊಳ್ಳಲು ಹಾಗೂ ಹೊಸದಾಗಿ ಅರ್ಹತೆ ಪಡೆದವರು ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಮತದಾರರ ಪಟ್ಟಿಯಲ್ಲಿರುವ ದೋಷಗಳನ್ನು ಸರಿಪಡಿಸಿ, ನಿಖರ, ವಿಶ್ವಾಸಾರ್ಹ ಹಾಗೂ ಪಾರದರ್ಶಕ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದೇ ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.  

"ನಾನು ಸಹ ಈ ಅಭಿಯಾನದಲ್ಲಿ ಭಾಗವಹಿಸಿ ಅಗತ್ಯ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದೇನೆ. ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸರಿಯಾಗಿದೆಯೇ ಎಂಬುದನ್ನು ಪರೀಶೀಲಿಸಬೇಕು. ಅಗತ್ಯವಿದ್ದಲ್ಲಿ ತಿದ್ದುಪಡಿ ಮಾಡಿಸಿಕೊಳ್ಳಬೇಕು. ಹೊಸದಾಗಿ ಮತದಾನದ ಅರ್ಹತೆ ಪಡೆದವರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವ ಮೂಲಕ ಈ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು" ಎಂದು ಅವರು ಮನವಿ ಮಾಡಿದರು.  


ಸುದ್ದಿ ಓದಿ