ಘಟಪ್ರಭಾದಲ್ಲಿ ಪಲ್ಸ್ ಪೋಲಿಯೊಗೆ ಚಾಲನೆ
Pulse polio launched in Ghataprabha
ಘಟಪ್ರಭಾ 28: ಘಟಪ್ರಭಾದ ಮಲ್ಲಾಪುರ ಪಿಜಿ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಸಮುದಾಯ ಆರೋಗ್ಯ ಕೇಂದ್ರದ ಘಟಪ್ರಭಾ -2 ಸಿಎಚ್ಒ ಪುಂಡಲೀಕ ಹುಲಿಕಟ್ಟಿ ಹಾಗೂ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಡಾ. ಕೆಂಪಣ್ಣ ಚೌಕಸಿ ಮಕ್ಕಳಿಗೆ ಎರಡು ಹನಿ ಪೋಲಿಯೊ ಲಸಿಕೆ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ಕೆಂಪಣ್ಣ ಚೌಕಸಿ, ಭಾರತವು ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದರೂ, ಕೆಲ ರಾಷ್ಟ್ರಗಳಲ್ಲಿ ಇನ್ನೂ ವೈರಸ್ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ತಪ್ಪದೇ ಪೋಲಿಯೊ ಲಸಿಕೆ ಹಾಕಿಸುವುದು ಅಗತ್ಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರಾದ ಶಿವಲೀಲಾ ಅಕ್ಕಿ, ಸವಿತಾ ಕಂಬಾರ, ಬಸವ ಕೇಂಚಣ್ಣವರ, ಪೋಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 