ಪುನರ್ ಮನನ ಕಾರ್ಯಾಗಾರ
ಧಾರವಾಡ 27: ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಉಚ್ಚ ನ್ಯಾಯಾಲಯದ ಕಾನೂನು ಸೇವಾ ಸಮಿತಿ ಧಾರವಾಡ ಪೀಠ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಮಧ್ಯಸ್ಥಿಕೆಗಾರರಿಗೆ ಎರಡು ದಿನಗಳ ಪುನರ್ ಮನನ ತರಬೇತಿ ಕಾರ್ಯಗಾರದ ಉದ್ಘಾಟನಾ ಸಮಾರಂಭವನ್ನು ನಾಳೆ ಜುಲೈ 27 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟಕರಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ಬಿ. ಜಿ. ರಮಾ ಅವರು ಆಗಮಿಸುವರು.
ಅತಿಥಿಗಳಾಗಿ ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಸದಸ್ಯರಾದ ಆನಂದ್ ಕುಮಾರ್ ಮಗದುಮ, ವಿ. ಡಿ. ಕಾಮರೆಡ್ಡಿ ಮತ್ತು ಧಾರವಾಡ ವಕೀಲರ ಸಂಘದ ಅಧ್ಯಕ್ಷ
ಅಶೋಕ ಏಣಿಗಿ, ಕಾರ್ಯಾಗಾರದ ತರಬೇತಿದಾರರಾಗಿ ಲಕ್ಷ್ಮೀಶ್ ರಾವ್ ಹಾಗೂ ಬೀನಾ ದೇವರಾಜ್ ಭಾಗವಹಿಸುವರು.
ತರಬೇತಿಯಲ್ಲಿ ಧಾರವಾಡ, ಗದಗ ಜಿಲ್ಲೆಯ ಮಧ್ಯಸ್ಥಿಕೆಗಾರರು ಹಾಗೂ ಉಚ್ಚ ನ್ಯಾಯಾಲಯ ಧಾರವಾಡ ಪೀಠದ ಮಧ್ಯಸ್ಥಿಕೆಗಾರರು ಭಾಗವಹಿಸುವರು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ್ ಎಫ್.ದೊಡ್ಡಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.