ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದೆ ಪುನೀತ್ ಆರೋಗ್ಯ: ವೈದ್ಯರ ಹೇಳಿಕೆ
ಬೆಂಗಳೂರು, ಅ. 29: ಖ್ಯಾತ ನಟ ಪುನೀತ್ ರಾಜ್ ಕುಮಾರ್ ಆರೋಗ್ಯದ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ. ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದೆ ಎಂದು ವಿಕ್ರಂ ಆಸ್ಪತ್ರೆ ವೈದ್ಯರು ಹೇಳಿದ್ದಾರೆ.
ವಿಕ್ರಂ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ರಂಗನಾಥ್ ನಾಯಕ್ ಈ ಕುರಿತು ಮಾಹಿತಿ ನೀಡಿದ್ದು, ಪುನೀತ್ ಹೃದಯ ಮೊದಲಿನಂತೆ ಕಾರ್ಯನಿರ್ವಹಿಸಲು ಬೇಕಾದ ಎಲ್ಲ ಚಿಕಿತ್ಸೆಯನ್ನೂ ನೀಡಲಾಗುತ್ತಿದೆ ಎಂದಿದ್ದಾರೆ.
ಪುನೀತ್ ದೇಹಸ್ಥಿತಿ ತುಂಬಾ ಗಂಭೀರವಾಗಿದೆ. ಏನನ್ನೂ ಹೇಳಲು ಸಾಧ್ಯವಿಲ್ಲ. ಕೊನೆಯ ಕ್ಷಣದ ಪ್ರಯತ್ನ ಮಾಡುತ್ತಿದ್ದು, ಉಳಿದರ್ಧ ಗಂಟೆಯಲ್ಲಿ ಸಂಪೂರ್ಣ ಮಾಹಿತಿ ನೀಡಲಾಗುವುದು ಎಂದು ಹೇಳುವ ಮೂಲಕ ಕೈ ಚೆಲ್ಲಿದ್ದಾರೆ.
ನಟ ದರ್ಶನ್, ನಟ ಯಶ್, ಸಚಿವ ಸೋಮಣ್ಣ ಸೇರಿದಂತೆ ಬಹುತೇಕ ಗಣ್ಯರು ವಿಕ್ರಂ ಆಸ್ಪತ್ರೆಗೆ ದೌಡಾಯಿಸಿ, ಪುನೀತ್ ರಾಜ್ ಕುಮಾರ್ ದೇಹಸ್ಥಿತಿಯ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.