ತಂದೆ ತಾಯಿ ಸಮಾಧಿ ಬಳಿಯೇ ಅಂತ್ಯಕ್ರಿಯೆ ಸಾಧ್ಯತೆ
ಬೆಂಗಳೂರು, 30: ಕನ್ನಡ ಚಿತ್ರರಂಗದ ಯುವ ರತ್ನ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ, ತಂದೆ- ತಾಯಿ ಡಾ. ರಾಜಕುಮಾರ್, ಪಾರ್ವತಮ್ಮ ರಾಜಕುಮಾರ್ ಸಮಾಧಿ ಪಕ್ಕದಲ್ಲಿಯೇ ನೆರವೇರಿಸಲು ಸಿದ್ದತೆಗಳು ನಡೆಯುತ್ತಿವೆ ಎಂದು ಮೂಲಗಳು ಹೇಳಿವೆ.
ಕುಟುಂಬದವರೊಂದಿಗೆ ಸಮಾಲೋಚಿಸಿ ರಾಜ್ಯ ಸರ್ಕಾರ ಈ ಸಂಬಂಧ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಅಮೆರಿಕಾದಲ್ಲಿ ವ್ಯಾಸಂಗ ನಡೆಸುತ್ತಿರುವ ಮಗಳು ಧೃತಿ ಬಂದ ಬಳಿಕ ನಾಳೆ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಈ ನಡುವೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿರಿಸಿರುವ ಪುನೀತ್ ರಾಜ್ ಕುಮಾರ್ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಲಕ್ಷಾಂತರ ಅಭಿಮಾನಿಗಳು, ಪಡೆಯುತ್ತಿದ್ದು, ಜನಸಾಗರವೇ ಹರಿದುಬರುತ್ತಿದೆ.