ಜು.16ರಂದು ಲಿಂಗೈಕ್ಯ ಗುರುಶಾಂತಲಿಂಗ ಶಿವಾಚಾರ್ಯರ ಪುಣ್ಯಾರಾಧನೆ
Punyaradhana of the late Gurushanthalinga Shivacharya on July 16
ಲೋಕದರ್ಶನ ವರದಿ
ಧಾರವಾಡ 14 : ವೀರಶೈವ ಧರ್ಮದ ಪಂಚಪೀಠಗಳಲ್ಲಿ ಒಂದಾದ ಬಾಳೆಹೊನ್ನೂರಿನ ರಂಭಾಪುರಿ ಜಗದ್ಗುರು ಪೀಠದ ಶಾಖಾಮಠವಾಗಿರುವ ತಾಲೂಕಿನ ಅಮ್ಮಿನಭಾವಿ ಗ್ರಾಮದ ಸಂಸ್ಥಾನ ಪಂಚಗೃಹ ಹಿರೇಮಠದಲ್ಲಿ ಲಿಂಗೈಕ್ಯ ಗುರುಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿಯವರ 90ನೇ ಪುಣ್ಯಾರಾಧನೆ ಮಹೋತ್ಸವವು ಜುಲೈ 16ರಂದು (ಆಷಾಢ ಶುಧ್ದ ದ್ವಿತೀಯಾ) ಗುರುವಾರ ಭಕ್ತಿಭಾವದಿಂದ ನಡೆಯಲಿದೆ.
ಈ ಅಂಗವಾಗಿ ಶ್ರೀಮಠದ ಆವರಣದಲ್ಲಿರುವ ಲಿಂಗೈಕ್ಯ ಗುರುಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿಯವರ ಯೋಗಸಮಾಧಿಯಲ್ಲಿ ಬೆಳಿಗ್ಗೆ ಮಹಾರುದ್ರಾಭಿಷೇಕ, ಶಿವಾಷ್ಟೋತ್ತರ ಶತನಾಮಾವಳಿ, ನೂತನಾಂಬರ ಧಾರಣೆ, ಪುಷ್ಪಾಲಂಕಾರ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆಯಲಿವೆ. ಹಿರಿಯ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಹಾಗೂ ಕಿರಿಯ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಕಾರ್ಯಕ್ರಮಗಳು ಜರುಗಲಿವೆ.
ಲಿಂಗೈಕ್ಯ ಗುರುಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿಯವರು ತಮ್ಮ ಸಂಪೂರ್ಣ ಸಂನ್ಯಾಸ ಜೀವನವನ್ನು ಇಷ್ಟಲಿಂಗ ತಪೋನಿಷ್ಠೆಗೆ ಸಮರ್ಿಸಿ, ಸರಳತೆ, ಸತ್ಯ ಹಾಗೂ ಶುದ್ಧ ಜೀವನದ ಆದರ್ಶಗಳನ್ನು ಬೋಧಿಸಿದ ಮಹನೀಯರಾಗಿದ್ದಾರೆ. ಅವರ ಆಧ್ಯಾತ್ಮಿಕ ಸೇವೆ, ಧಾರ್ಮಿಕ ಚಿಂತನೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಪುಣ್ಯಾರಾಧನೆ ಸಂದರ್ಭದಲ್ಲಿ ಸ್ಮರಿಸಲಾಗುವುದು. ಅಮ್ಮಿನಭಾವಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಹಾಗೂ ಅವಳಿ ನಗರಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪುಣ್ಯಾರಾಧನೆ ಮಹೋತ್ಸವದಲ್ಲಿ ಪಾಲ್ಗೊಳ್ಳುವ ನೀರೀಕ್ಷೆಯಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 