ಕಾರವಾರ

ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಹ್ನ 2 ರವರೆಗೆ ಅವಕಾಶ - ಜಿಲ್ಲಾಧಿಕಾರಿ ಆದೇಶ

ಅಗತ್ಯ ವಸ್ತುಗಳ ಖರೀದಿಗೆ  ಮಧ್ಯಾಹ್ನ 2 ರವರೆಗೆ ಅವಕಾಶ -  ಜಿಲ್ಲಾಧಿಕಾರಿ ಆದೇಶ

ಸರ್ಕಾದ ಹೊಸ ಮಾರ್ಗಸೂಚಿ : ಇನ್ನೊಂದು ವಾರ ಕಟ್ಟುನಿಟ್ಟಾಗಿರಿ : ಕರೋನಾ ಇಳಿಮುಖ ; 

ಕಾರವಾರ 13 : ಕೋವಿಡ್ ಜಿಲ್ಲೆಯಲ್ಲಿ ಇಳಿಮುಖವಾಗಿದ್ದು, ಸಾರ್ವಜನಿಕರು ಇನ್ನೊಂದು ವಾರ ಕಟ್ಟುನಿಟ್ಟಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಅಗತ್ಯ ಕೆಲಸಗಳಿಗೆ ಮಾತ್ರ  ಮಾಸ್ಕ ಧರಿಸಿಯೇ ಓಡಾಡಬೇಕು. ನಂತರದ ದಿನಗಳಲ್ಲಿ ಕೋವಿಡ್ ಬಗ್ಗೆ ಜಾಗೃತಿಯನ್ನು ಮನಸಲ್ಲಿ ಇಟ್ಟುಕೊಂಡರೆ ಜನ ಜೀವನ ಸಹಜ ಸ್ಥಿತಿಗೆ ಬರಲಿದೆ ಎಂದು ಜಿಲ್ಲಾಧಿಕಾರಿ ಮುಗಿಲನ್ ಅಭಿಪ್ರಾಯಪಟ್ಟರು.  

ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊರಡಿಸಿದ ಪರಿಷ್ಕೃತ ಆದೇಶದನ್ವಯ ಜಿಲ್ಲೆಯಲ್ಲಿ ಜೂನ್ 21 ರವರೆಗೆ ಸಾರ್ವಜನಿಕರ ಅಗತ್ಯ ವಸ್ತುಗಳ ಖರೀದಿಗೆ ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿದಿನ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. 

ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಡಿಯೋ  ಕಾನ್ಫರೆನ್ಸ್‌ ಮೂಲಕ   ರವಿವಾರ  ಪತ್ರಕರ್ತರೊಂದಿಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಮಾರ್ಗಸೂಚಿಯ ಪಾಲನೆಯೊಂದಿಗೆ  

ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಬೂತ್‌ಗಳು ಮತ್ತು ಪ್ರಾಣಿಗಳ  ಆಹಾರ ದೊಂದಿಗೆ ವ್ಯವಹರಿಸುವ ಅಂಗಡಿಗಳಿಗೆ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ ಎಂದರು.  

ಆಪ್ಟಿಕಲ್ ಅಂಗಡಿಗಳು, ರಸ್ತೆ ಬದಿ ಮಾರಾಟಗಾರರಿಗೆ, ಸಾರ್ವಜನಿಕ ವಿತರಣಾ ವ್ಯವಸ್ಥೆಯ ಅಂಗಡಿಕಾರರಿಗೆ ಹಾಗೂ ಮದ್ಯದಂಗಡಿ ಮತ್ತು ಮಳಿಗೆಗಳಿಗೆ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ರವರೆಗೆ ಮಾತ್ರ ಅನುಮತಿಸಿದೆ ಎಂದರು. 

ಎಲ್ಲಾ ಉತ್ಪಾದನಾ ಘಟಕಗಳು, ಸ್ಥಾಪನೆ,  ಕೈಗಾರಿಕೆಗಳು ತಮ್ಮ ಸಿಬ್ಬಂದಿ ಸಾಮರ್ಥ್ಯದ ಶೇ. 50 ರೊಂದಿಗೆ ಕಾರ್ಯನಿರ್ವಹಿಸಬೇಕು. ಕೊವಿಡ್  ಘಟಕಗಳು,  ಸಂಸ್ಥೆಗಳು, ಗಾಮೆಂರ್ಟ್ ತಯಾರಿಕೆಯಲ್ಲಿ ತೊಡಗಿರುವ ಕೈಗಾರಿಕೆಗಳು ಶೇ. 30 ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದು   ಜಿಲ್ಲಾಧಿಕಾರಿ ನುಡಿದರು . ಮನೆಗಳ ಹೊರಗಿನ ವ್ಯಕ್ತಿಗಳ ಚಲನೆಯನ್ನು ಕಡಿಮೆ ಮಾಡಲು ಎಲ್ಲಾ ಅಗತ್ಯ  ವಸ್ತುಗಳನ್ನು  ಹೋಮ್ ಡಿಲೇವರಿ ಪ್ರೋತ್ಸಾಹಿಸಲಾಗುತ್ತದೆ. ನಿರ್ಮಾಣ ಸಾಮಗ್ರಿಗಳೊಂದಿಗೆ ವ್ಯವಹರಿಸುವ ಎಲ್ಲಾ ಅಂಗಡಿಗಳು,  ಸಂಸ್ಥೆಗಳು, ವಿಶೇಷವಾಗಿ ಸಿಮೆಂಟ್ ಮತ್ತು ಉಕ್ಕು ಮುಂತಾದ ಅಂಗಡಿಗಳಿಗೆ ಕೊವಿಡ್ ಸೂಕ್ತ ನಡವಳಿಕೆಯ ಪಾಲನೆಯೊಂದಿಗೆ ಕಂಟೈನ್ ಮೆಂಟ್ ಜೋನ್‌ಗಳ ಹೊರಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ ಎಂದರು. 

ಕೊವಿಡ್  ಸೂಕ್ತ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ನಡಿಗೆ ಮತ್ತು ಜಾಗಿಂಗ್ ಉದ್ದೇಶಕ್ಕಾಗಿ ಬೆಳಿಗ್ಗೆ 5 ರಿಂದ 10 ರವರೆಗೆ ಉದ್ಯಾನವನಗಳನ್ನು ತೆರೆಯಲು ಅನುಮತಿಯಿದೆ. ಆದರೆ ಯಾವುದೇ ಗುಂಪು ಚಟುವಟಿಕೆಗಳಿಗೆ ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಮುಗಿಲನ್ ಹೇಳಿದರು.  ಟ್ಯಾಕ್ಸಿಗಳು ಮತ್ತು ಆಟೋ ರಿಕ್ಷಾಗಳನ್ನು ನಿರ್ವಹಿಸಲು ಅನುಮತಿಯಿದ್ದು, ಗರಿಷ್ಠ 2 ಪ್ರಯಾಣಿಕರನ್ನು ಮಾತ್ರ ಸಾಗಿಸಬಹುದು. ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಕಚೇರಿಗಳ ಜೊತೆಗೆ,  ಕೃಷಿ ಮತ್ತು ಸಂಬಂಧಿತ ಕಚೇರಿಗಳು, ಪಿಡಬ್ಲ್ಯೂಡಿ, ವಸತಿ, ಆರ್‌ಟಿಒಎಸ್, ಸಹಕಾರ, ನಬಾರ್ಡ್‌ ಮತ್ತು ಕಂದಾಯ ಇಲಾಖೆಯ ಕಚೇರಿಗಳು ಶೇ. 50 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಯಿದೆ. ಉತ್ಪಾದನೆ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಕೌಶಲ್ಯ ತರಬೇತಿ ಸೇರಿದಂತೆ ನಿರ್ಮಾಣ ಚಟುವಟಿಕೆಗಳು ದುರಸ್ತಿ ಕಾರ್ಯಗಳನ್ನು ಅನುಮತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. 

ಜಿಲ್ಲೆಗೆ ಸೀಮಿತವಾಗಿ ತೆಗೆದುಕೊಂಡ  ಕ್ರಮಗಳು : 

ಕೋವಿಡ್‌-19 ನಿಂತ್ರಣಕ್ಕಾಗಿ ಸರ್ಕಾರದ ಅದೇಶದನ್ವಯ ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮಗಳಿಗೆ ಅನುಮತಿ ನೀಡುವುದನ್ನು ನಿಷೇಧಿಸಿದೆ. ತಹಶೀಲ್ದಾರರು ಆಯಾ ತಾಲೂಕಾ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಕಂಡುಬಂದಲ್ಲಿ ಜಿಲ್ಲಾಧಿಕಾರಿಗಳ ಅನುಮತಿ ಪಡೆದು ಅಂತಹ ಪ್ರದೇಶಗಳನ್ನು ಮೈಕ್ರೋ ಕಂಟೈನ್ ಮೆಂಟ್ ವಲಯವನ್ನಾಗಿ ಘೋಷಣೆ ಮಾಡಿ ಸಂಪೂರ್ಣ ಲಾಕ್ ಡೌನ ಮಾಡಬಹುದು. ಇಂತಹ ಪ್ರದೇಶಗಳಲ್ಲಿ ದಿನನಿತ್ಯದ ಅಗತ್ಯ ವಸ್ತುಗಳು, ತರಕಾರಿ ಹಾಗೂ ದಿನಸಿಯನ್ನು ಮನೆ ಮನೆಗೆ ಮಾರಾಟ ಮಾಡಲು ಸ್ಥಳೀಯ ಆಡಳಿತಗಳು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ. 

ರಾತ್ರಿ  ಕರ್ಫ್ಯೂ:  ಸರ್ಕಾರದ ಪರಿಷ್ಕೃತ ಮಾರ್ಗಸೂಚಿ ಅನ್ವಯ ಜೂನ್ 21 ರವರೆಗೆ ರಾತ್ರಿ ಕರ​‍್್ಯೂ ಜಾರಿಯಲ್ಲಿರಲಿದೆ. ಈ ಸಂದರ್ಭದಲ್ಲಿ ಅಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ, ವ್ಯಕ್ತಿಗಳ ಚಲನೆಯನ್ನು ಸಂಜೆ 7 ರಿಂದ ಬೆಳಿಗ್ಗೆ 5 ರವರೆಗೆ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ತುರ್ತು ಅಗತ್ಯವಿರುವ ರೋಗಿಗಳು ಮತ್ತು ಅವರ ಪರಿಚಾರಕರು, ವ್ಯಕ್ತಿಗಳನ್ನು ಸ್ಥಳಾಂತರಿಸಲು ಅನುಮತಿಸಲಾಗುತ್ತದೆ.  

ವಾರಾಂತ್ಯದ ಕರ್ಫ್ಯೂ: ಶುಕ್ರವಾರ ರಾತ್ರಿಯಿಂದ ಶನಿವಾರ, ರವಿವಾರ ವಾರ‌್ಯಂತದ ಕರ​‍್್ಯೂ ಜಾರಿಯಲ್ಲಿರುತ್ತದೆ. ಸೋಮವಾರ ಎಂದಿನಂತೆ ಜನ ಜೀವನ ಇರಲಿದ್ದು, ಸಾಮಾಜಿಕ ಅಂತರ ಹಾಗೂ ಮಾಸ್ಕ ಕಡ್ಡಾಯ ಎಂದರು. ಪತ್ರಕರ್ತರೊಂದಿಗಿನ ವಿಡಿಯೋ  ಕಾನ್ಫರೆನ್ಸ್‌ ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್‌.ಕೆ., ಜಿಲ್ಲಾ ಪಂಚಾಯತ್ ಸಿಇಓ ಪ್ರಿಯಾಂಗಾ ಎಂ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು. 


ಸುದ್ದಿ ಓದಿ