ಉಕ್ರೇನ್ ಗೆ ಶಸ್ತ್ರಾಸ್ತ್ರ ಪೂರೈಸುತ್ತಿರುವ ಜರ್ಮನಿ, ಫ್ರಾನ್ಸ್ ಗೆ ಪುಟಿನ್ ಎಚ್ಚರಿಕೆ
ಮಾಸ್ಕೋ: ಮೇ 28 : ಉಕ್ರೇನ್‌ಗೆ ಶಸ್ತ್ರಾಸ್ತ್ರ ಪೂರೈಕೆಯನ್ನು ಹೆಚ್ಚಿಸುತ್ತಿರುವುದರ ವಿರುದ್ಧ ಜರ್ಮನಿ ಮತ್ತು ಫ್ರಾನ್ಸ್ ನಾಯಕರಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎಚ್ಚರಿಕೆ ನೀಡಿದ್ದಾರೆ. ಇದು ಪಾಶ್ಚಿಮಾತ್ಯ ಪರ ದೇಶದಲ್ಲಿ ಪರಿಸ್ಥಿತಿಯನ್ನು ಮತ್ತಷ್ಟು ಅಸ್ಥಿರಗೊಳಿಸಬಹುದು ಎಂದು ಪುಟಿನ್ ಹೇಳಿದ್ದಾರೆ.
ಉಕ್ರೇನ್‌ಗೆ ಮುಂದುವರಿದ ಶಸ್ತ್ರಾಸ್ತ್ರ ಪೂರೈಕೆಯು “ಅಪಾಯಕಾರಿ” ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮತ್ತು ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್‌ಗೆ ತಿಳಿಸಿದ್ದಾರೆ. ಪರಿಸ್ಥಿತಿಯನ್ನು ಮತ್ತಷ್ಟು ಅಸ್ಥಿರಗೊಳಿಸುವ ಮತ್ತು ಮಾನವೀಯ ಬಿಕ್ಕಟ್ಟಿನ ಉಲ್ಬಣಗೊಳ್ಳುವ ಅಪಾಯಗಳ ಬಗ್ಗೆ ಪುಟಿನ್ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.