ಗುಣ ಮಟ್ಟದ ಶಿಕ್ಷಣ ಇಂದಿನ ಅಗತ್ಯ:ಡಾ.ಕಸ್ತೂರಿ ಕರಮುಡಿ

ಗುಣ ಮಟ್ಟದ ಶಿಕ್ಷಣ ಇಂದಿನ ಅಗತ್ಯ:ಡಾ.ಕಸ್ತೂರಿ ಕರಮುಡಿ Quality education is the need of the hour: Dr. Kasturi Karamudi

ಕೊಪ್ಪಳ 19: ಇಂದಿನ ಆಧುನಿಕ ಯುಗದಲ್ಲಿ ಕಂಪ್ಯೂಟರ್ ಶಿಕ್ಷಣದ ಜೊತೆಗೆ ಮಕ್ಕಳಿಗೆ  ಉತ್ತಮ ಗುಣಮಟ್ಟದ ಶಿಕ್ಷಣ ಇಂದಿನ ಅಗತ್ಯವಾಗಿದೆ ಎಂದು ಕೊಪ್ಪಳದ ಅನ್ನಪೂರ್ಣೇಶ್ವರಿ ಆಸ್ಪತ್ರೆಯ ವೈದ್ಯರಾದ ಡಾ/ ಕಸ್ತೂರಿ ವೀರೇಶ್ ಕರಮುಡಿ ಹೇಳಿದರು.ಅವರು ಇತ್ತೀಚಿಗೆ ನಗರದ ಸರ್ಕಾರಿ ನೌಕರರ ಸಾಂಸ್ಕೃತಿಕ ಭವನದಲ್ಲಿ ಸಾಂಸ್ಕೃತಿಕ ಕ್ರೀಡೆ ಮತ್ತು ತರಬೇತಿ ಸಂಸ್ಥೆ ವತಿಯಿಂದ ಸಾಹಿತಿ ಶಿಕ್ಷಣ ಪ್ರೇಮಿ ದಿ/ ಹಾಜಿ ವಹಿದುದ್ದೀನ್ ರವರ ಸ್ಮರಣೆಗಾಗಿ ಶಿಕ್ಷಣದಲ್ಲಿ ನೈತಿಕ ಮೌಲ್ಯ ಎಂಬ ವಿಷಯ ಕುರಿತು ಏರಿ​‍್ಡಸಿದ ವಿಚಾರ ಸಂಕೀರ್ಣ ಹಾಗೂ ಪ್ರಸಕ್ತ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಗಣಿನೀಯ ಸಾಧನೆ ಮಾಡಿ  ರಾಜ್ಯ ಮತ್ತು ಜಿಲ್ಲೆಯ ಕೀರ್ತಿ ತರುವಲ್ಲಿ ಯಶಸ್ವಿಯಾದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಸಮಾರಂಭದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಪ್ರತಿಭಾವಂತ ಮಕ್ಕಳಿಗೆ ಸಂಸ್ಥೆಯ ಪರವಾಗಿ ಸನ್ಮಾನಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು, ಮುಂದುವರೆದು ಮಾತನಾಡಿ ಇಂದಿನ ಮಕ್ಕಳೇ ಈ ನಾಡಿನ ಭಾವಿ ಪ್ರಜೆಗಳಾಗಿದ್ದು ಅವರ ಭವಿಷ್ಯ ಉಜ್ವಲಗೊಳ್ಳಲು ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಅತ್ಯವಶ್ಯಕವಾಗಿದೆ ಮಕ್ಕಳ ಮೇಲೆ  ಶಿಕ್ಷಕರಷ್ಟೇ ಪಾಲಕರ ಜವಾಬ್ದಾರಿ ಕೂಡ ಹೆಚ್ಚಾಗಿದೆ, ಪ್ರತಿಯೊಬ್ಬರು ತಮ್ಮ ತಮ್ಮ ಪಾಲಿನ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಬೇಕು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಕೂಡ ಅಷ್ಟೇ ಅಗತ್ಯವಾಗಿದೆ.