ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ: ಸಂತೋಷ ಲಾಡ್
Quick solutions to people's problems: Santosh Lad
ಲೋಕದರ್ಶನ ವರದಿ
ಹುಬ್ಬಳ್ಳಿ, ಸೆ.5: ಜನರ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ಸರ್ಕಾರ ಪ್ರಜಾಸೇವಾ ಇಲಾಖೆ ಸ್ಥಾಪಿಸಿದ್ದು, ಜನರ ಅಹವಾಲುಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಾರ್ಮಿಕ, ಉದ್ಯೋಗ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಕಲಘಟಗಿಯ ಜನತಾ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ನಡೆದ ಪ್ರಜಾಸೇವಾ ಆಂದೋಲನ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರ ಜನರ ಮನೆ ಬಾಗಿಲಿಗೆ ತಲುಪುವ ಉದ್ದೇಶ ಹೊಂದಿದೆ. ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ ಶೀಘ್ರ ಪರಿಹರಿಸಲಾಗುವುದು. ಪ್ರತಿ ತಾಲೂಕಿನಲ್ಲಿ ಪ್ರಜಾಸೇವಾ ಆಂದೋಲನ ಸಭೆಗಳನ್ನು ನಡೆಸಲಾಗುವುದು ಎಂದರು.
ಶಾಸಕ ಪ್ರಸಾದ್ ಅಬ್ಬಯ್ಯ ಮಾತನಾಡಿ, ಸರ್ಕಾರ ಜನಪರವಾಗಿ ಕಾರ್ಯನಿರ್ವಹಿಸುತ್ತಿದ್ದು, ರೈತರು, ಕಾರ್ಮಿಕರು ಹಾಗೂ ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಅಧಿಕಾರಿಗಳು ನಿಗದಿತ ಅವಧಿಯಲ್ಲಿ ಜನರ ಅಹವಾಲುಗಳನ್ನು ಪರಿಹರಿಸುವ ಮೂಲಕ ಪ್ರಾಮಾಣಿಕ ಸೇವೆ ಸಲ್ಲಿಸಬೇಕು ಎಂದು ಹೇಳಿದರು.
ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ಸರ್ಕಾರದ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಬೇಕು. ಈಗಾಗಲೇ ರಾಜ್ಯದಾದ್ಯಂತ ಸುಮಾರು 42 ಸಾವಿರಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಬರಪೀಡಿತ ತಾಲೂಕುಗಳ ಘೋಷಣೆ ಹಾಗೂ ರೈತರಿಗೆ ಪರಿಹಾರ ನೀಡುವ ಕ್ರಮಗಳ ಬಗ್ಗೆಯೂ ಮಾತನಾಡಿದರು.
ಶಾಸಕ ಎಫ್.ಎಚ್. ಜಕ್ಕಪ್ಪನವರ್ ಮಾತನಾಡಿ, ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಪ್ರತಿದಿನ ತಾಲೂಕು ಹಾಗೂ ಜಿಲ್ಲಾ ಕಚೇರಿಗಳಲ್ಲಿ ದಾಖಲಿಸಿಕೊಂಡು ಶೀಘ್ರ ಪರಿಹರಿಸಬೇಕು. ಅಧಿಕಾರಿಗಳು ಜನರ ಸೇವೆಗೆ ಬದ್ಧರಾಗಿರಬೇಕು ಎಂದರು. ಜಿಲ್ಲಾಧಿಕಾರಿ ಸ್ನೇಹಲ್ ಆರ್. ಕಾರ್ಯಕ್ರಮದ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ವಿಶೇಷಚೇತನರಿಗೆ ತ್ರಿಚಕ್ರ ವಾಹನ, ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕಿಟ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ವಿತರಿಸಲಾಯಿತು. ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಯಿತು.
ಕಾರ್ಯಕ್ರಮದಲ್ಲಿ ಎಸ್.ಆರ್. ಪಾಟೀಲ, ಕುಮಾರ್ ಟಿ.ಎಚ್., ಭುವನೇಶ್ ಪಾಟೀಲ, ಗುಂಜನ್ ಆರ್ಯ, ಪ್ರಭಾವತಿ ಫಕೀರಪುರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 