ಉಪಮುಖ್ಯಮಂತ್ರಿ ಹುದ್ದೆಗೆ ಆರ್ ಬಿ ತಿಮ್ಮಾಪುರ ಅರ್ಹರು: ಪ್ರಲ್ಹಾದ ಸಣ್ಣಕ್ಕಿ
RB Thimmapura is eligible for the post of Deputy Chief Minister: Pralha Sanakkai
ಲೋಕದರ್ಶನ ವರದಿ
ಮಹಾಲಿಂಗಪುರ 02 : ಉತ್ತರ ಕರ್ನಾಟಕದಲ್ಲಿ ಪ್ರಭಾವಿ ದಲಿತ ನಾಯಕರಾಗಿ ಅಹಿಂದ ಸಮುದಾಯಗಳ ಪರವಾಗಿ ಹೋರಾಟ ಮಾಡುತ್ತಿರುವ ರಾಜ್ಯದ ಅತ್ಯಂತ ಹಿರಿಯ ಮತ್ತು ದಲಿತ ಸಮುದಾಯದ ಪ್ರಭಾವಿ ನಾಯಕ, ಪ್ರಸ್ತುತ ಅಬಕಾರಿ ಸಚಿವರಾಗಿರುವ ಆರ್ ಬಿ ತಿಮ್ಮಾಪುರ ಅವರಿಗೆ ಉಪಮುಖ್ಯಮಂತ್ರಿ ಹುದ್ದೆಯನ್ನು ನೀಡಬೇಕೆಂದು ಮಾಜಿ ಪುರಸಭೆ ಸದಸ್ಯ ಪ್ರಹ್ಲಾದ ಸಣ್ಣಕ್ಕಿ ನೂತನ ಮುಖ್ಯಮಂತ್ರಿಗಳಿಗೆ ಮತ್ತು ಹೈಕಮಾಂಡ್ ಗೆ ಒತ್ತಾಯಿಸಿದರು.
ಸ್ಥಳೀಯ ತಮ್ಮ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಬಾಗಲಕೋಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಅತ್ಯಂತ ಅಂತರದಿಂದ ಗೆಲುವು ಸಾಧಿಸಿದ ಕೀರ್ತಿ ಜೊತೆಗೆ ಹಲವು ದಶಕಗಳಿಂದ ಪಕ್ಷ ಸಂಘಟನೆಯಲ್ಲಿ ಮತ್ತು ಸರ್ಕಾರದ ವಿವಿಧ ಜವಾಬ್ದಾರಿಗಳನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿಕೊಂಡು ಬಂದಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಹಾಗೂ ವಿಶೇಷವಾಗಿ ಶೋಷಿತ ಮತ್ತು ಹಿಂದುಳಿದ ವರ್ಗಗಳ ಏಳಿಗೆಗಾಗಿ ಅವರು ನೀಡಿರುವ ಕೊಡುಗೆ ಅಪಾರವಾಗಿದೆ ಎಂದರು.
ನಂತರ ಮಾಜಿ ಪುರಸಭೆ ಸದಸ್ಯ ಬಸವರಾಜ ಚಮಕೇರಿ ಮತ್ತು ಚನ್ನಪ್ಪ ರಾಮೋಜಿ ಮಾತನಾಡಿ, ನಿಯೋಜಿತ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ ಅವರು ಆರ್ ಬಿ ತಿಮ್ಮಾಪುರ ಅವರ ಕಳೆದ ಬಾರಿಯ ಕೆಲಸಗಳನ್ನು ಗುರುತಿಸಿ ತಮ್ಮ ಸಂಪುಟದಲ್ಲಿ ಉನ್ನತ ಸ್ಥಾನ ನೀಡಬೇಕು. ಜೊತೆಗೆ ಈ ಭಾಗದ ತಮ್ಮದೇ ಪಕ್ಷದ ಪ್ರಭಾವಿ ನಾಯಕ ಸಿದ್ದು ಕೊಣ್ಣೂರ ಅವರನ್ನು ನಿಗಮ ಮಂಡಳಿಯಲ್ಲಿ ಸೇರಿಸಿಕೊಳ್ಳಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ನಾನಾ ಜೋಶಿ, ವಿನೋದ ಸಿಂಪಿ, ಮಹಾಲಿಂಗ ಮಾಳಿ, ಶಿವಾನಂದ ಹುಣಶ್ಯಾಳ, ಹಣಮಂತ ಅಳ್ಳಿಮಟ್ಟಿ,ಸುರೇಶ ಸಣ್ಣಕ್ಕಿ ಸೇರಿದಂತೆ ಇತರರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 