ಕ್ರೀಡೆ

RCB ಮಾರ್ಕೆಟಿಂಗ್ ಮುಖ್ಯಸ್ಥ ಸೇರಿ ನಾಲ್ವರ ಬಂಧನ

RCB ಮಾರ್ಕೆಟಿಂಗ್ ಮುಖ್ಯಸ್ಥ ಸೇರಿ ನಾಲ್ವರ ಬಂಧನ

ಬೆಂಗಳೂರು: ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ ಹನ್ನೊಂದು ಮಂದಿ ಆರ್ ಸಿಬಿ ಅಭಿಮಾನಿಗಳು ಮೃತಪಟ್ಟಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಅದರಂತೆ ಪೊಲೀಸರು ನಾಲ್ವರು ಆಯೋಜಕರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಬಂಧಿತರಲ್ಲಿ ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ, ಡಿಎನ್​ಎ ಮ್ಯಾನೇಜ್​ಮೆಂಟ್​​ ಸಿಬ್ಬಂದಿ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್​ ಸೇರಿದ್ದಾರೆ ಎನ್ನಲಾಗಿದ್ದು ಇವರನ್ನು ಶುಕ್ರವಾರ ಮುಂಜಾನೆ ಸುಮಾರು 6.30ರ ವೇಳೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸ್‌ ಆಯುಕ್ತ ಬಿ.ದಯಾನಂದ ಸೇರಿ ಐವರು ಹಿರಿಯ ಪೊಲೀಸ್‌ ಅಧಿಕಾರಿಗಳ ತಲೆದಂಡವಾಗಿದೆ. ಜತೆಗೆ ಘಟನೆ ಬಗ್ಗೆ ನಿವೃತ್ತ ನ್ಯಾ. ಮೈಕೆಲ್‌ ಡಿ.ಕುನ್ಹಾ ನೇತೃತ್ವದಲ್ಲಿ ಏಕವ್ಯಕ್ತಿ ಆಯೋಗದ ಮೂಲಕ ವಿಚಾರಣೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕಾಲ್ತುಳಿತ ಪ್ರಕರಣ ನಡೆದ ಬಳಿಕ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಇಬ್ಬರು ಅಧಿಕಾರಿಗಳಾದ ಕಾರ್ಯದರ್ಶಿ ಶಂಕರ್ ಮತ್ತು ಖಜಾಂಚಿ ಜಯರಾಮ್ ನಾಪತ್ತೆಯಾಗಿದ್ದು, ಅವರನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ. 

 

ಸುದ್ದಿ ಓದಿ