ತಾಳಿಕೋಟಿ

ಆರ್‌.ಎಸ್‌.ಪಾಟೀಲ ಕೂಚಬಾಳಗೆ ಟಿಕೇಟ್ ನೀಡುವಂತೆ ಒತ್ತಾಯ

ಆರ್‌.ಎಸ್‌.ಪಾಟೀಲ ಕೂಚಬಾಳಗೆ ಟಿಕೇಟ್ ನೀಡುವಂತೆ ಒತ್ತಾಯ

ತಾಳಿಕೋಟೆ : ಮುಂಬರುವ ಸ್ಥಳಿಯ ಸಂಸ್ಥೆಗಳಿಂದ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ವಿಜಯಪುರ-ಬಾಗಲಕೋಟೆ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದ ವಿಜಯಪುರ ಜಿಲ್ಲಾ ಘಟಕದ ಅದ್ಯಕ್ಷ ಆರ್‌.ಎಸ್‌.ಪಾಟೀಲ ಕೂಚಬಾಳ ಅವರಿಗೆ ಟಿಕೇಟ್ ನೀಡುವಂತೆ ಬಿಜೆಪಿ ನಗರ ಘಟಕದ ವತಿಯಿಂದ  ಒತ್ತಾಯಿಸಲಾಯಿತು. 

ಪಟ್ಟಣದ ವಿಠ್ಠಲಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ಆರ್‌.ಎಸ್‌.ಪಾಟೀಲ ಕೂಚಬಾಳ ಅವರು ಪಕ್ಷದ ನಿಷ್ಠಾವಂತ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಮಂಡಲ ಅಧ್ಯಕ್ಷರಾಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಅಧ್ಯಕ್ಷರಾಗಿ ಪಕ್ಷವನ್ನು ತಳಮಟ್ಟದಲ್ಲಿ ಸಂಘಟನೆ ಮಾಡಿದ್ದಾರೆ. ಪಕ್ಷ ನಿಷ್ಠರಾಗಿ ಸಂಘಟನೆ ನನ್ನುಸಿರು ಎನ್ನು ಪಕ್ಷದ ಸಿದ್ದಾಂತದಡಿಯಲ್ಲಿ ಪಕ್ಷವನ್ನು ಸಂಘಟಿಸಿದ್ದಾರೆ. ಮಂಡಲ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ತಾಪಂದಲ್ಲಿ ಬಿಜೆಪಿ ಅಧಿಕಾರವನ್ನು ಹಿಡಿದಿತ್ತು. ಪ್ರಧಾನ ಕಾರ್ಯದರ್ಶಿಯಾಗಿದ್ದಾಗ 5 ಜಿಲ್ಲಾ ಪಂಚಾಯತದಲ್ಲಿ ಮೂರು ಜಿಲ್ಲಾ ಪಂಚಾಯತ ಸ್ಥಾನಗಳನ್ನು ಗೆದ್ದುಕೊಂಡಿದ್ದು ಅವರ ಪಕ್ಷ ಸಂಘಟನೆಗೆ ಹಿಡಿದ ಕೈಗನ್ನಡಿಯಾಗಿದೆ. ಇನ್ನು ಜಿಲ್ಲಾ ಅಧ್ಯಕ್ಷರಾಗಿದ್ದಾಗ ನಡೆದ ಸಿಂದಗಿ ವಿಧಾನ ಸಭಾ ಉಪ ಚುನಾವಣೆಯಲ್ಲಿ 33 ಸಾವಿರ ಮತಗಳ ಅಂತರದಲ್ಲಿ ಬಿಜೆಪಿ ಗೆಲ್ಲಲ್ಲು ಜಿಲ್ಲಾಧ್ಯಕ್ಷರ ಶ್ರಮ ಸಾಕಷ್ಟಿದೆ. ಆರು ತಿಂಗಳಿಂದ ಸಿಂದಗಿ ಪಟ್ಟಣದಲ್ಲಿ ಹಲವು ಸಭೆಗಳನ್ನು ನಡೆಸಿ ಸಿಂದಗಿ ಗೆಲ್ಲಲ್ಲು ಕಾರಣಿಕರ್ತರಾಗಿದ್ದಾರೆ. ಗ್ರಾಮ ಪಂಚಾಯತ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಲು ಆರ್‌.ಎಸ್‌.ಪಾಟೀಲರು ಶ್ರಮವಹಿಸಿದ್ದಾರೆ. ಮುದ್ದೇಬಿಹಾಳ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷ ಬಿಜೆಪಿ ಟಿಕೆಟ್ ನೀಡದಿದ್ದರೂ ಸಹಿತ ಮುದ್ದೇಬಿಹಾಳ, ದೇವರ ಹಿಪ್ಪರಗಿ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಲ್ಲು ಶ್ರಮವಹಿಸಿ ಗೆಲ್ಲಿಸಿಕೊಂಡು ಬಂದಿದ್ದಾರೆ. ಸದಾ ಪಕ್ಷದ ಕಾರ್ಯಕರ್ತರೊಂದಿಗೆ ಇದ್ದು ಕಾರ್ಯಕರ್ತರ ಸಮಸ್ಯೆಗಳಿಗೆ ಕಿವಿಗೊಟ್ಟು ಕಾರ್ಯಕರ್ತರ ಸಮಸ್ಯೆಗಳಿಗೆ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸದಾ ಸಂಘಟನೆಗೆ ತುಡಿಯುವ ಆರ್‌.ಎಸ್‌.ಪಾಟೀಲರು ಸ್ವಚ್ಚ ಅವರಿಗೆ ಪಕ್ಷದಲ್ಲಿ ದೊಡ್ಡ ಹುದ್ದೆ ಹೊಂದಿದ್ದರೂ ಸಹಿತ ಸ್ವಚ್ಚ ಆಡಳಿತ ನಡೆಸಿದ್ದಾರೆ. ಯಾವುದೇ ಪ್ರತಿಫಲಾಕ್ಷೆ ಇಲ್ಲದೆ ದುಡಿದ ಆರ್‌.ಎಸ್‌.ಪಾಟೀಲ ಕೂಚಬಾಳ ಅವರಿಗೆ ಬಿಜೆಪಿ ಟಿಕೇಟ್ ನೀಡಿದ್ದಲ್ಲಿ ಸುಲಭವಾಗಿ ಗೆಲುವು ಸಾಧಿಸಲಿದೆ. ಬಿಜೆಪಿ ಹೈಕಮಾಂಡ, ಸಿಎಂ. ರಾಜ್ಯಾಧ್ಯಕ್ಷರು ಆರ್‌.ಎಸ್‌.ಪಾಟೀಲ ಕೂಚಬಾಳ ಅವರ ಸಂಘಟನೆಯನ್ನು ಪರಿಗಣೀಶಿ ಅವರಿಗೆ ಟಿಕೇಟ್ ನೀಡಬೇಕು ಎಂದು ಒತ್ತಾಯಿಸಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕಾರಣಿ ಸದಸ್ಯ ಕಾಶಿನಾಥ ಮುರಾಳ, ಮಂಡಲ ಪ್ರಧಾನ ಕಾರ್ಯದರ್ಶಿ ಮಂಜುನಾಥ ಶೇಟ್ಟಿ, ನಗರ ಘಟಕದ ಅಧ್ಯಕ್ಷ ರಾಘವೇಂದ್ರ ಚವ್ಹಾಣ, ಮಂಡಲ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಈಶ್ವರ ಹೂಗಾರ, ಮುಖಂಡರಾದ ರವಿ ಕಟ್ಟಿಮನಿ, ವಿಠ್ಠಲ ಮೋಹಿತೆ, ರಾಮು ಜಗತಾಪ, ನ್ಯಾಯವಾದಿ ಗಂಗಾಧರ ಕಸ್ತೂರಿ, ಶಶಿಧರ ಡಿಸಲೆ ಸೇರಿದಂತೆ ಇತರರು ಇದ್ದರು. 


ಸುದ್ದಿ ಓದಿ