ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಸ್ವಾಗತಿಸಿದ ಆರ್‌ಎಸ್‌ಎಸ್
ನಾಗಪುರ, ಸೆಪ್ಟೆಂಬರ್ 30: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದ ವಿಶೇಷ ಸಿಬಿಐ ನ್ಯಾಯಾಲಯದ ತೀರ್ಪನ್ನು ಬುಧವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಸ್ವಾಗತಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಸಿ ಭಯ್ಯಾಜಿ ಜೋಷಿ, ಪ್ರಕರಣದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸುವ ನ್ಯಾಯಾಲಯದ ತೀರ್ಪನ್ನು ಆರ್‌ಎಸ್‌ಎಸ್ ಸ್ವಾಗತಿಸುತ್ತದೆ ಎಂದಿದ್ದಾರೆ.
ಈ ತೀರ್ಪನ್ನು ಗೌರವಿಸಿ, ಸಮಾಜದ ಎಲ್ಲಾ ವಲಯಗಳ ಜನರು ಒಗ್ಗಟ್ಟು ಮತ್ತು ಸೌಹಾರ್ದತೆಯಿಂದ ಕೆಲಸ ಮಾಡಬೇಕು. ಸಮಾಜದ ಸವಾಲುಗಳನ್ನು ಎದುರಿಸಿ ದೇಶದ ಪ್ರಗತಿಗೆ ಕೆಲಸ ಮಾಡಬೇಕು ಎಂದು ಟ್ವೀಟ್ ಮಾಡಿದ್ದಾರೆ.