ಜೀಡಿಮೆಟ್ಲಾ ಡಿಪೋದಲ್ಲಿ ಬಸ್ ಹರಿದು RTC ಮೆಕ್ಯಾನಿಕ್ ಸಾವು
RTC Mechanic Killed After Being Run Over by Bus at Jeedimetla Depot
ಹೈದರಾಬಾದ್, ಆಗಸ್ಟ್ 11: ಹೈದರಾಬಾದ್‌ನ ಜೀಡಿಮೆಟ್ಲಾ ಆರ್‌ಟಿಸಿ ಡಿಪೋದಲ್ಲಿ ಮಂಗಳವಾರ ಬೆಳಗ್ಗೆ ಬಸ್‌ನ ಬ್ರೇಕ್‌ಗಳನ್ನು ಪರಿಶೀಲಿಸುತ್ತಿದ್ದ ವೇಳೆ ಬಸ್ ಹರಿದು 39 ವರ್ಷದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (TGSRTC) ಮೆಕ್ಯಾನಿಕ್ ಮೃತಪಟ್ಟಿದ್ದಾರೆ.
ಮೃತರನ್ನು ಸಂತೋಷ್ ಕುಮಾರ್ ಎಂದು ಗುರುತಿಸಲಾಗಿದೆ. ಬ್ರೇಕ್ ಸಮಸ್ಯೆ ಕಾಣಿಸಿಕೊಂಡಿದ್ದ ಆರ್‌ಟಿಸಿ ಬಸ್‌ನ್ನು ಅವರು ದುರಸ್ತಿ ಮಾಡುತ್ತಿದ್ದರು. ಪ್ರಾಥಮಿಕ ಮಾಹಿತಿಯ ಪ್ರಕಾರ, ದುರಸ್ತಿ ಕಾರ್ಯ ಪೂರ್ಣಗೊಳಿಸಿದ ಬಳಿಕವೂ ಸಂತೋಷ್ ಬಸ್‌ನ ಕೆಳಭಾಗದಲ್ಲೇ ಇದ್ದಾಗ ಚಾಲಕನು ಬಸ್‌ನ್ನು ಚಾಲನೆ ಮಾಡಿ ಮುಂದಕ್ಕೆ ಚಲಿಸಿದ್ದಾನೆ ಎನ್ನಲಾಗಿದೆ.
ಈ ವೇಳೆ ಬಸ್‌ನ ಚಕ್ರಗಳಡಿ ಸಿಲುಕಿದ ಸಂತೋಷ್ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕನ ನಿರ್ಲಕ್ಷ್ಯದಿಂದಲೇ ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.
ಮಾಹಿತಿ ತಿಳಿದು ಜೀಡಿಮೆಟ್ಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆ ಕುರಿತು ತನಿಖೆ ಆರಂಭಿಸಿದ್ದಾರೆ.
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 