ಉಪ ಲೋಕಾಯುಕ್ತರಿಂದ ಆರ್ಟಿಒ ಕಚೇರಿ ಪರೀಶೀಲನೆ
RTO office inspected by Upa Lokayukta
ಗದಗ, ಆ.7: ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಶುಕ್ರವಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (ಆರ್ಟಿಒ) ಕಚೇರಿಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು. ಕಚೇರಿಯ ವಿವಿಧ ದಾಖಲೆಗಳನ್ನು ಪರೀಶೀಲಿಸಿದ ಅವರು,
ಜಪ್ತಿ ಮಾಡಿರುವ ವಾಹನಗಳ ವಿವರ, ಶಾಲಾ ವಾಹನಗಳ ದಾಖಲೆಗಳು ಹಾಗೂ ತೆರಿಗೆ ಪಾವತಿಸದ ವಾಹನಗಳ ಮಾಹಿತಿಯನ್ನು ಪರೀಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ದಾಖಲೆಗಳಿಲ್ಲದೆ ಸಂಚರಿಸುವ ಶಾಲಾ ವಾಹನಗಳ ವಿರುದ್ಧ ನಿಯಮಾನುಸಾರ ಕ್ರಮ ಜರುಗಿಸುವಂತೆ ನಿರ್ದೇಶನ ನೀಡಿದರು.
ಕಚೇರಿ ಸಿಬ್ಬಂದಿಯ ಹಾಜರಾತಿ, ನಗದು ಮತ್ತು ಚಲನವಲನ ವಹಿಗಳನ್ನು ಪರೀಶೀಲಿಸಿದ ಅವರು, ಎಲ್ಲಾ ದಾಖಲೆಗಳನ್ನು ನಿಯಮಿತವಾಗಿ ನವೀಕರಿಸಬೇಕು ಹಾಗೂ ಸಿಬ್ಬಂದಿ ಪ್ರತಿದಿನ ಕಡ್ಡಾಯವಾಗಿ ಹಾಜರಾತಿ ಮತ್ತು ಸಂಬಂಧಿತ ವಹಿಗಳಲ್ಲಿ ಮಾಹಿತಿ ದಾಖಲಿಸಬೇಕು ಎಂದು ಸೂಚಿಸಿದರು.
ಸರ್ಕಾರಿ ಸೇವೆಗಳನ್ನು ಪಾರದರ್ಶಕವಾಗಿ ಹಾಗೂ ಪ್ರಾಮಾಣಿಕವಾಗಿ ಒದಗಿಸಬೇಕು. ಎಲ್ಲಾ ಸೇವೆಗಳು ಆನ್ಲೈನ್ ಮೂಲಕ ಲಭ್ಯವಿದ್ದರೂ ಮಧ್ಯವರ್ತಿಗಳ ಹಾವಳಿ ಮತ್ತು ಸಾರ್ವಜನಿಕರಿಂದ ಹಣ ವಸೂಲಿ ಮಾಡುವ ಕುರಿತು ದೂರುಗಳು ಬರುತ್ತಿವೆ. ಇಂತಹ ಅಕ್ರಮಗಳು ಮರುಕಳಿಸಿದರೆ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಹಿರಿಯ ನ್ಯಾಯಾಧೀಶರು, ಆಪ್ತ ಕಾರ್ಯದರ್ಶಿ ಕಿರಣ್ ಪಿ.ಎಂ. ಪಾಟೀಲ, ಸುನೀಲಕುಮಾರ್ ಆರ್., ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡರ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಪ್ರಾದೇಶಿಕ ಸಾರಿಗೆ ಅಧಿಕಾರಿ ವಿಶಾಲ್ ಜಿ.ಪಿ. ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 