ಎಐಐಸಿ ಚುನಾವಣೆ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಮತ ಚಲಾವನೆ
ಬಳ್ಳಾರಿ 17: ಅ (17)ರಂದು ಅಖಿಲ ಭಾರತ ಕಾಂಗ್ರೆಸ್ ಕಮಿಟಿ (ಎಐಸಿಸಿ) ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ದೇಶದ ಎಲ್ಲಾ ರಾಜ್ಯಗಳಲ್ಲೂ ಚುನಾವಣೆ ನಡೆಯುತ್ತಿದೆ. ಹೀಗಾಗಿ, ಭಾರತ್ ಜೋಡೋ ಪಾದಯಾತ್ರೆ ಕೈಗೊಂಡಿರುವ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರು ಬಳ್ಳಾರಿ ಜಿಲ್ಲೆಯ ಸಂಗನಕಲ್ಲು ಗ್ರಾಮದ ಬಳಿ ಸ್ಥಾಪಿಸಿರುವ ತಾತ್ಕಾಲಿಕ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಕನ್ನಡಿಗ ಹಾಗೂ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹಾಗೂ ಮತ್ತೊಬ್ಬ ಮುಖಂಡ ಶಶಿ ತರೂರು ಸ್ಪರ್ಧಿಸಿದ್ದಾರೆ.ದೇಶದ ಎಲ್ಲಾ ರಾಜ್ಯಗಳ ಕಾಂಗ್ರೆಸ್ ಸಮಿತಿ ಕಚೇರಿಗಳಲ್ಲಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಭಾರತ್ ಜೋಡೋ ಪಾದಯಾತ್ರೆ ಹಿನ್ನೆಲೆ ಕೆಲವು ನಾಯಕರಿಗೆ ಬಳ್ಳಾರಿಯ ಸಂಗನಕಲ್ಲು ಬಳಿ ಮತಕೇಂದ್ರವನ್ನು ಸ್ಥಾಪಿಸಲಾಗಿತ್ತು. ಮತದಾನದ ಸಂದರ್ಭದಲ್ಲಿ ಮತದಾರರು ಸರದಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸಿದರು. ಹಾಗೇ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸಹ ಸರದಿ ಸಾಲಿನಲ್ಲಿ ಸಾಗಿ ವೋಟ್ ಹಾಕಿದರು.