ಕೋವಿಡ್ -19 ಹೋರಾಟ ನಿರತ ಆಶಾ ಕಾರ್ಯಕರ್ತರು, ನರ್ಸ್, ಅಂಗನವಾಡಿ ಕಾರ್ಯಕರ್ತರಿಗೆ ರಾಹುಲ್ ಶ್ಲಾಘನೆ
ನವದೆಹಲಿ, ಏ 10, ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ತಮ್ಮ ಜೀವವನ್ನು ಪಣಕ್ಕಿಟ್ಟು ಹೋರಾಡುತ್ತಿರುವ ಆಶಾ ಕಾರ್ಯಕರ್ತರು, ನರ್ಸ್ ಗಳು, ಅಂಗನವಾಡಿ ಕಾರ್ಯಕರ್ತರ ತ್ಯಾಗವನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶ್ಲಾಘಿಸಿದ್ದಾರೆ.ಅಗತ್ಯದ ಸಂದರ್ಭದಲ್ಲಿ ದೇಶಕ್ಕಾಗಿ ದುಡಿಯುವುದೇ ನಿಜವಾದ ದೇಶಭಕ್ತಿ. ನಮ್ಮ ಸಮುದಾಯಕ ಕಾರ್ಯಕರ್ತರು ನಿಜವಾದ ದೇಶಭಕ್ತರು, ತೆರೆಮರೆಯ ನಾಯಕರು, ಮುಖ್ಯವಾಹಿನಿಯಿಂದ ದೂರವುಳಿದು ಜನರ ಸುರಕ್ಷತೆಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೊಗಳಿದ್ದಾರೆ.
ಭಯ ಹಾಗೂ ತಪ್ಪು ಮಾಹಿತಿಗಳು ವೈರಸ್ ಕಿಂತ ಅಪಾಯಕಾರಿಯಾಗಿರುವ ಪರಿಸ್ಥಿತಿಯಲ್ಲಿ ಸಮುದಾಯ ಕಾರ್ಯಕರ್ತರು ಜನರಿಗೆ ಸರಿಯಾದ ಮಾಹಿತಿ ನೀಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದಿದ್ದಾರೆ. ಒಂದು ದೇಶವಾಗಿ ನಾವು ಅವರಿಗೆ ಆಭಾರಿಯಾಗಿದ್ದೇವೆ. ಈ ಬಿಕ್ಕಟ್ಟು ಶಮನವಾದ ನಂತರ ಅವರ ಅಪೂರ್ವ ಕೊಡುಗೆಯನ್ನು ಗುರುತಿಸಿ ಅವರು ಕೆಲಸದ ಪರಿಸ್ಥಿತಿಗಳು ಸುಧಾರಣೆಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 