ಗಂಡು ಮಗುವಿಗೆ ಜನ್ಮವಿತ್ತ ರೈನಾ ಪತ್ನಿ
ನವದೆಹಲಿ, ಮಾ 23, ಭಾರತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಸುರೇಶ್ ರೈನಾ ಮತ್ತು ಅವರ ಪತ್ನಿ ಪ್ರಿಯಾಂಕಾ ಸೋಮವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇದರೊಂದಿಗೆ ಈ ದಂಪತಿ ಸದ್ಯ ಇಬ್ಬರು ಮಕ್ಕಳನ್ನು ಹೊಂದಿದಂತಾಗಿದೆ. 2016ರ ಮೇನಲ್ಲಿ ರೈನಾ ಮಗಳು ಗ್ರೇಸಿಯಾ ಜನಿಸಿದ್ದಳು. ಭಾರತ ತಂಡದಲ್ಲಿ ಉಜ್ವಲ ಭವಿಷ್ಯ ಕಂಡುಕೊಂಡ ಎಡಗೈ ಬ್ಯಾಟ್ಸ್ ಮನ್ ರೈನಾ, 2011ರ ವಿಶ್ವಕಪ್ ಮತ್ತು 2013ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ವಿಜೇತ ಭಾರತ ತಂಡದ ಸದಸ್ಯರಾಗಿದ್ದರು.ರೈನಾ ಪ್ರತಿನಿಧಿಸುವ ಐಪಿಎಲ್ ಫ್ರಾಂಚೈಸಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಚೆನ್ನೈ ತಂಡದ ಸಹ ಆಟಗಾರ ಹರ್ಭಜನ್ ಸಿಂಗ್ , ರೈನಾ ದಂಪತಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಭಾರತದ ಪರ 226 ಏಕದಿನ ಪಂದ್ಯಗಳನ್ನಾಡಿರುವ ರೈನಾ, 5615 ರನ್ ಗಳಿಸಿದ್ದಾರೆ. 35.31 ರ ಬ್ಯಾಟಿಂಗ್ ಸರಾಸರಿ ಹೊಂದಿರು ಅವರು 5 ಶತಕ 36 ಅರ್ಧಶತಗಳನ್ನು ದಾಖಲಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 