ಬಾಲ ಕಾರ್ಮಿಕರ ಪದ್ದತಿ ಕುರಿತು ಜಾಗೃತಿ ಮೂಡಿಸಿ: ಅಪರ ಜಿಲ್ಲಾಧಿಕಾರಿ
Raise awareness about the practice of child labor: Additional District Collector
ಕಾರವಾರ ಜೂ.02 :- ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ದತಿ ನಿರ್ಮೂಲನೆ ಕುರಿತಂತೆ ಜಿಲ್ಲೆಯಲ್ಲಿನ ಎಲ್ಲಾ ಹೋಂ ಸ್ಟೇ ಹಾಗೂ ರೆಸಾರ್ಟ್ಗಳಲ್ಲಿ ಹೆಚ್ಚಿನ ತಪಾಸಣೆ ನಡೆಸಿ ಜಾಗೃತಿ ಮೂಡಿಸುವಂತೆ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ನಿರ್ದೇಶನ ನೀಡಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆ, ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ತಂಡದ ಮೂಲಕ ತಪಾಸಣೆ ನಡೆಸಿ, ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವವರ ವಿರುದ್ದ ಕಾನೂನು ಪ್ರಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ ಅವರು, ಇಲಾಖೆಗಳ ಸಮನ್ವಯ ಸಾಧಿಸಿ, ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವಂತೆ ತಿಳಿಸಿದರು.
ತಾಲೂಕು ಮಟ್ಟದಲ್ಲಿ ಪ್ರತಿ 3 ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಮಿತಿ ಸಭೆ ನಡೆಸಬೇಕು ಹಾಗೂ ಸಭೆಯ ಅನುಪಾಲನಾ ವರದಿಯನ್ನು ಸಲ್ಲಿಬೇಕು ಹಾಗೂ ಬಾಲ ಕಾರ್ಮಿಕ ನಿಷೇಧ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮಗಳ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು.
ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿಯನ್ನು ಪ್ರತಿ ತಿಂಗಳು ಕಡ್ಡಾಯವಾಗಿ ಕಾರ್ಮಿಕ ಇಲಾಖೆಗೆ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ, ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಲಲಿತಾ ಸಾತೇನಹಳ್ಳಿ, ವೀಣಾ ಮಾಸ್ತಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಉಮೇಶ, ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಸಂದೇಶ ಗಾಂವಕರ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 