ಕಾರ್ಮಿಕರಿಗೆ ಸರ್ಕಾರದ ಯೋಜನಾ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸಿ
ಗದಗ 08: ಅಸಂಘಟಿತ ಕಾರ್ಮಿಕರಿಗೆ ನೀಡಲಾಗುವ ಶ್ರಮ ಸಮ್ಮಾನ ಪ್ರಶಸ್ತಿ ಪ್ರಧಾನದಲ್ಲಿ ಯಾವುದೇ ಲೋಪವಾಗದಂತೆ, ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚಿಸಿದರು.
ಗದಗ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಅವರು ಮಾತನಾಡಿದರು. ನಿಗದಿತ ದಿನಾಂಕದೊಳಗೆ ಸಲ್ಲಿಕೆಯಾದ ಅರ್ಜಿಗಳನ್ನು ಮಾತ್ರ ಪರಿಗಣಿಸಬೇಕು. ಪ್ರಶಸ್ತಿ ವಿಷಯದಲ್ಲಿ ಸಮಸ್ಯೆಗಳು ಉದ್ಭವವಾಗದಂತೆ ನೋಡಿಕೊಳ್ಳಬೇಕು. ಮಾರ್ಚ 1 ರಂದು ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆಯುವ ಕಾರ್ಮಿಕರ ಸಮ್ಮಾನ ದಿನಾಚರಣೆ ಕಾರ್ಯಕ್ರಮದಲ್ಲಿ ಕಾರ್ಮಿಕರಿಗೆ ಇರುವ ಸರ್ಕಾರದ ಯೋಜನೆ ಹಾಗೂ ಪಿಂಚಣಿ ಬಗ್ಗೆ ಉಪನ್ಯಾಸದ ಮೂಲಕ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳು ನುಡಿದರು.
ಖಾಸಗಿ, ವಾಣಿಜ್ಯ ವಾಹನ ಚಾಲಕರು, ಕಟ್ಟಡ ಕಾರ್ಮಿಕರು ಸೇರಿದಂತೆ 12 ಅಸಂಘಟಿತ ವಲಯದ ಕಾರ್ಮಿಕರಿಗೆ ಪ್ರತಿ ಜಿಲ್ಲೆಗ ಪ್ರತಿ ವರ್ಗಕ್ಕೆ ನೀಡುವ ಪ್ರಥಮ ಬಹುಮಾನ 15 ಸಾವಿರ ನಗದು ಹಾಗೂ ಚಿನ್ನದ ಪದಕ, ದ್ವಿತೀಯ ಬಹುಮಾನ 10 ಸಾವಿರ ನಗದು ಹಾಗೂ ಬೆಳ್ಳೆ ಪದಕ, ತೃತೀಯ ಬಹುಮಾನ 8 ಸಾವಿರ ನಗದು ಜೊತೆಗೆ 1 ಕಂಚಿನ ಪದಕವನ್ನು ಎಂದು ಗದಗ ಕಾರ್ಮಿಕ ಇಲಾಖೆಯ ಅಧಿಕಾರಿ ಸುಧಾ ಗರಗ ತಿಳಿಸಿದರು.
ಕೇಂದ್ರ ಸಕರ್ಾರದ ಪಿ.ಎಮ್.ಎಸ್.ವೈ.ಎಂ. ಶ್ರಮಯೋಗಿ ಮಾನಧನ್ ಹಾಗೂ ವ್ಯಾಪಾರಿ ಮಾನಧನ್ ಯೋಜನೆಯ ಬಗ್ಗೆ ಅರಿವು ಮೂಡಿಸುವುದು, ಅಂಬೇಡ್ಕರ್ ಕಾರ್ಮಿಕ ಸಹಾಯಕ ಹಸ್ತ ಯೋಜನೆಯಡಿ ನೋಂದಣಿ ಮಾಡಿಸುವುದು, ಆಹ್ವಾನ ಪತ್ರಿಕೆ ಸಿದ್ಧಪಡಿಸುವಿಕೆ ಸೇರಿದಂತೆ ಹಲವು ವಿಷಯಗಳ ಕುರಿತು ಸಭೆಯಲ್ಲಿ ಚಚರ್ಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ, ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ಮನ್ಸೂರ್ ಅಲಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ.ಸಲಗೆರೆ, ನಿಮರ್ಿತಿ ಕೇಂದ್ರದ ಜಿ.ವಿ.ಶಿರೋಳ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 