ರಜೌರಿ : ಭದ್ರತಾ ಪಡೆ, ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ

ರಜೌರಿ : ಭದ್ರತಾ ಪಡೆ, ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ

  ಜಮ್ಮು, ಆಗಸ್ಟ್ 06 ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ಥನಮಂಡಿ ಪ್ರದೇಶದಲ್ಲಿ ಶುಕ್ರವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಭೀಕರ ಗುಂಡಿನ ಚಕಮಕಿ ನಡೆದಿದೆ.
  ಖಚಿತ ಮಾಹಿತಿ ಮೇರೆಗೆ ಪೋಲಿಸ್ ಮತ್ತು ಸೇನೆಯ ಜಂಟಿ ತಂಡವು ಥಾನಮಂಡಿಯಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ಆರಂಭಿಸಿತು. "ಶೋಧನಾ ತಂಡಗಳು ಶಂಕಿತ ಸ್ಥಳವನ್ನು ಸಮೀಪಿಸುತ್ತಿದ್ದಂತೆ, ಅಲ್ಲಿ ಅಡಗಿದ್ದ ಭಯೋತ್ಪಾದಕರು, ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ," ಎಂದು ಪೊಲೀಸರು ಹೇಳಿದ್ದಾರೆ.
  ಜಮ್ಮು ವಲಯ ಪೊಲೀಸರು ಟ್ವೀಟ್ ಮೂಲಕ, ರಾಜೌರಿ ಜಿಲ್ಲೆಯ ಥನಮಂಡಿ ಪ್ರದೇಶದಲ್ಲಿ ಉಗ್ರರೊಂದಿಗೆ ಎನ್ಕೌಂಟರ್ ನಡೆದಿರುವುದನ್ನು ಖಚಿತಪಡಿಸಿದ್ದಾರೆ. "ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ವಿನಿಮಯ ನಡೆಯುತ್ತಿದೆ" ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿ ಓದಿ