ಶಾಸಕ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು : ರಾಜು ಶಿರಗಾಂವೆ ಆಗ್ರಹ
Raju Shirgaonve demands that MLA Satish Jarkiholi be made KPCC President
ರಾಯಬಾಗ 01 : ಡಿಕೆ ಶಿವಕುಮಾರ ಅವರ ನೂತನ ಸಚಿವ ಸಂಪುಟದಲ್ಲಿ ಯಮಕಣಮರಡಿ ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಭೀಮ್ಸ್ ನಿರ್ದೇಶಕ ರಾಜು ಶಿರಗಾಂವೆ ಆಗ್ರಹಿಸಿದ್ದಾರೆ. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನುಭವಿ ಹಾಗೂ ಮುತ್ಸದ್ಧಿ ರಾಜಕಾರಣಿಯಾದ ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರ ಸಂಪುಟದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಸಚಿವ ಸ್ಥಾನ ನೀಡಬೇಕು. ರಾಜ್ಯದಲ್ಲಿ ತನ್ನದೇ ಆದ ಬಲಿಷ್ಠ ಬಳಗ ಹೊಂದಿದ್ದಾರೆ. ಅಲ್ಲದೇ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.
ಸರಕಾರ ತಕ್ಷಣ ಇವರಿಗೆ ಸ್ಥಾನಗಳನ್ನು ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕಾರ್ಯಕರ್ತರ ಸಭೆ ಸೇರಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.ನಂತರ ಡಾ. ಹಫೀಜ್ ಮುಬಾರಕ ಡೋಂಗರೆ ಮಾತನಾಡಿ, ಶಾಸಕರಾದ ಸತೀಶ್ ಜಾರಕಿಹೊಳಿ ಹಾಗೂ ಅಲ್ಪಸಂಖ್ಯಾತ ಸಮಾಜದ ಬೆಳಗಾವಿ ಶಾಸಕರಾದ ಅಸೀಪ್(ರಾಜು) ಸೇಠ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು. ಈ ವೇಳೆ ಇರಫಾನ್ ತರಡೆ, ಶಪಿಉಲ್ಲಾ ಗೋಲಂದಾಜ್, ಸಾಗರ ಝಂಡೆನವರ, ನ್ಯಾ.ಬಂದೆನವಾಜ್ ಮುಲ್ಲಾ, ಇಮಿತಿಯಾಜ್ ಮುಲ್ಲಾ, ಅರಬಾಜ್ ಜಮಾದಾರ, ಮುಸ್ತಾಕ ರಶೀದ್ ಮುಲ್ಲಾ, ಹಫೀಜ್ ಪಹೀಂ ಸೇರಿದಂತೆ ಜಾರಕಿಹೊಳಿ ಹಾಗೂ ಅಸೀಫ್ ಸೇಠ್ ಅಭಿಮಾನಿಗಳು ಉಪಸ್ಥಿತರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 