ರಾಮದುರ್ಗ ಬಳಿ ಭೀಕರ ಅಪಘಾತ : 6 ಯಲ್ಲಮ್ಮ ಭಕ್ತರ ದುರ್ಮರಣ, ಹಲವರು ಗಂಭೀರ : ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ

ರಾಮದುರ್ಗ ಬಳಿ ಭೀಕರ ಅಪಘಾತ : 6 ಯಲ್ಲಮ್ಮ ಭಕ್ತರ ದುರ್ಮರಣ, ಹಲವರು ಗಂಭೀರ : ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ

ಬೆಳಗಾವಿ : ಜಿಲ್ಲೆಯ ಸುಕ್ಷೇತ್ರ ಯಲ್ಲಮ್ಮ ದೇವಸ್ಥಾನಕ್ಕೆ ತೆರಳುತ್ತಿದ್ದ ಗುಡ್ಸ್ ವಾಹನವೊಂದು ಮರಕ್ಕೆ ಅಪ್ಪಳಿಸಿದ ಹಿನ್ನೆಲೆಯಲ್ಲಿ ಒಟ್ಟು 6 ಭಕ್ತರು ಮೃತಪಟ್ಟು ಕೆಲವು ಗಂಭೀರ ವಾಗಿ ಗಾಯಗೊಂಡಿರುವ ಘಟನೆ ರಾಮದುರ್ಗ ತಾಲೂಕಿನ ಚಿಂಚನೂರು ಗ್ರಾಮದ ಬಳಿ ಬುಧವಾರ ತಡರಾತ್ರಿ ನಡೆದಿದೆ. 


   ಈ ಘಟನೆಯಲ್ಲಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹುಲಕುಂದ ನಿವಾಸಿಗಳು ಮೃತಪಟ್ಟಿದ್ದು, ಮೃತರಲ್ಲಿ ಹನುಮವ್ವ ನಾಕಾಡಿ (25), ದೀಪಾ (32), ಸವಿತಾ (17 ), ಸುಪ್ರೀತಾ (11), ಮಾರುತಿ (42), ಇಂದಿರವ್ವ (24) ಮೃತರಾದವರು. ಇವರೆಲ್ಲರೂ ಬುಧವಾರ ಮಧ್ಯರಾತ್ರಿ ಸವದತ್ತಿಯ ಯಲ್ಲಮ್ಮ ಗುಡ್ಡಕ್ಕೆ ಯಲ್ಲಮ್ಮ ದೇವಿಯ ದರ್ಶನಕ್ಕೆ ತೆರಳುತ್ತಿದ್ದರು. 

   ಜಿಲ್ಲೆಯ ರಾಮದುರ್ಗ ತಾಲೂಕಿನ ಚಿಂಚನೂರು ವಿಠ್ಠಲ ದೇವಸ್ಥಾನದ ಹತ್ತಿರ ಬುಧವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಮಹೀಂದ್ರಾ ಗುಡ್ಸ್ ವಾಹನ ಒಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿದ್ದ ಆಲದ ಮರಕ್ಕೆ ಗುದ್ಧಿದ ಪರಿಣಾಮ ಅದರಲ್ಲಿ ಸಂಚರಿಸುತ್ತಿದ್ದ ಐವರು ಸ್ಥಳದಲ್ಲಿಯೇ ಮೃತಪಟ್ಟಿರೆ, ಇನ್ನೋರ್ವ ಗಾಯಾಳು ಆಸ್ಪತ್ರೆಯಲ್ಲಿ ಅಸು ನಿಗಿದ್ದಾರೆ ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜಿವ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಕಟಕೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಡಾ. ಸಂಜೀವ ಪಾಟೀಲ ಅವರು ರಾತ್ರಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.


ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ 

    ಬೆಳಗಾವಿ : ರಾಮದುರ್ಗ ತಾಲೂಕಿನ ಕಟಕೊಳ ಪೊಲೀಸ್ ಠಾಣೆ ವ್ಯಾಪ್ತಿಯ ಚುಂಚನೂರು ಬಳಿ ಸಂಭವಿಸಿದ ಅಪಘಾತದಲ್ಲಿ ಮಾಡಿದ ಆರು ಜನರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರಧನ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

    ಸವದತ್ತಿ ಯಲ್ಲಮ್ಮ ದೇವಿ ದರ್ಶನಕ್ಕೆ ಮಹೀಂದ್ರ ವಾಹನದಲ್ಲಿ ಹೋಗುತ್ತಿದ್ದ ಆರು ಜನ ಪಟ್ಟಿದ್ದರು. ಇವರ ಕುಟುಂಬಗಳಿಗೆ ಪರಿಹಾರ ನೀಡಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದು ಸಚಿವ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ.

ಸುದ್ದಿ ಓದಿ