ನೀರಾವರಿ ಯೋಜನೆಗಳ ಡಿಪಿಆರ್ ಸಿದ್ಧಪಡಿಸುವಂತೆ ರಮೇಶ್ ಜಾರಕಿಹೊಳಿ ಸೂಚನೆ
ಬೆಂಗಳೂರು, ಏ.15, ರಾಜ್ಯದ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬೇಕಾಗಿರುವ ವಿಸ್ತೃತ ಯೋಜನಾ ವರದಿಗಳನ್ನು ಮತ್ತು ದಾಖಲಾತಿಗಳನ್ನು ತುರ್ತಾಗಿ ಸಿದ್ಧಪಡಿಸಿಕೊಳ್ಳುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸೂಚಿಸಿದ್ದಾರೆ.ವಿಧಾನಸೌಧದ ಜಲಸಂಪನ್ಮೂಲ ಸಚಿವರ ಕಚೇರಿಯಲ್ಲಿ ನಡೆದ ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಬೇಸಿಗೆಯಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ತೊಂದರೆ ಆಗಬಾರದು. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸಚಿವರು ಸೂಚಿಸಿದರು.
ಎಲ್ಲೆಡೆ ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿಗಳ ಕರೆಯಂತೆ ಸಾಮಾಜಿಕ ಅಂತರ ಕಾಯ್ದುಕೊಂಡು, ಆರೋಗ್ಯ ಸೇತು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಲು ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜನರಿಗೆ ಅಗತ್ಯ ಮಾಹಿತಿಗಳನ್ನು ತಿಳಿಸುವ ಕೆಲಸ ಮಾಡಿ ಸಾಮಾಜಿಕ ಜವಾಬ್ದಾರಿ ಮೆರೆಯಬೇಕು ಎಂದು ಸಚಿವರು ಕರೆ ನೀಡಿದರು. ಲಾಕ್ ಡೌನ್ ಮುಗಿದ ಬಳಿಕ ತುರ್ತಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು. ನೀರು ನಿರ್ವಹಣೆ ಮತ್ತು ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳ ಪ್ರಗತಿ ಬಗ್ಗೆ ಯಾವುದೇ ಸಂದರ್ಭದಲ್ಲಿ ಮಾಹಿತಿ ದೊರೆಯುವಂತೆ ಇರಬೇಕು. ಈ ಪ್ರಸಕ್ತ ವರ್ಷದಲ್ಲಿ ಪ್ರಾರಂಭಿಸಲಾಗುವ ಯೋಜನೆಗಳ ಡಿಪಿಆರ್ ವರದಿಗಳು ಮತ್ತು ದಾಖಲಾತಿ ಪತ್ರಗಳನ್ನು ತುರ್ತಾಗಿ ಸಿದ್ಧಪಡಿಸಿ ಕೊಳ್ಳಲು ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವರು ಸೂಚಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 