ರಾಮೋತ್ಸವ: ಸಿಹಿ ವಿತರಿಸಿ ಸಂಭ್ರಮಾಚರಣೆ
ಶಿಗ್ಗಾವಿ 23: ಪಟ್ಟಣದ ಶಂಕರನಾಗ ಆಟೋ ನಿಲ್ದಾಣದಲ್ಲಿ ಅಯೋಧ್ಯೆಯಲ್ಲಿ ನಡೆದ ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನಿಮಿತ್ಯ ಶ್ರೀರಾಮನ ಭಾವಚಿತ್ರಕ್ಕೆ ವಿಶೇಷ ಪೂಜೆಯನ್ನು ಸಲ್ಲಿಸಿ ನಂತರ ಸಿಹಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಡಾ. ರಾಣಿ ತಿರ್ಲಾಪೂರ, ಶಂಕರನಾಗ ಆಟೋ ಮಾಲಕರು, ಚಾಲಕರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.