ಅನಸೂಯಾ ಶಂಕರಪ್ಪ ಮದನಬಾವಿಗೆ ರಾಣಿ ಅಬ್ಬಕ್ಕ ದೇವಿ ರಾಜ್ಯ ಪ್ರಶಸ್ತಿ ಪ್ರಧಾನ
Rani Abbakka Devi State Award Principal for Anasuya Shankarappa Madanabavi
ಯರಗಟ್ಟಿ 09: ಸಮೀಪದ ಸಿಂದೋಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಅನಸೂಯಾ ಶಂಕರಪ್ಪ ಮದನಬಾವಿಯವರಿಗೆ ಕರ್ನಾಟಕ ರಾಜ್ಯ ಮಹಿಳಾ ನೌಕರರ ಸಂಘದ ಆಶ್ರಯದಲ್ಲಿ ಕಲಬುರಗಿಯಲ್ಲಿ ಪೂಜ್ಯ ಡಾ. ಬಸವರಾಜಪ್ಪ ಅಪ್ಪ ಮೆಮೋರಿಯಲ್ ಹಾಲ್ ನಲ್ಲಿ ಜರುಗಿದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ರಾಣಿ ಅಬ್ಬಕ್ಕ ದೇವಿ ಪ್ರಶಸ್ತಿಯನ್ನು ಗಣ್ಯರು ನೀಡಿ ಗೌರವಿಸಲಾಯಿತು.
ಈ ವೇಳೆ ವಿಧಾನಪರಿಷತ್ ಸದಸ್ಯರಾದ ಶಶಿಲ್ ನಮೋಸಿ, ಕಲಬುರಗಿ ಅಕ್ಕಮಹಾದೇವಿ ಆಶ್ರಮದ ಮಾತೋಶ್ರಿ ಶ್ರೀ ಪ್ರಭು ತಾಯಿ, ರಾಜ್ಯ ಮಹಿಳಾ ನೌಕರರ ಸಂಘದ ಅಧ್ಯಕ್ಷೆ ರಮಾ. ರಾಜ್ಯ ಪ್ರಧಾನ ಕಾರ್ಯದರ್ಶಿ ಗಳಾದ ಡಾ. ಶೈಲಜಾ. ಕಲಬುರಗಿ ಜಿಲ್ಲೆಯ ಮಹಿಳಾ ನೌಕರರ ಸಂಘದ ಅಧ್ಯಕ್ಷೆ ನಂದಿನಿ ಸನಬಾಳ್, ಬೆಳಗಾವಿ ಜಿಲ್ಲೆಯ ಶಿಕ್ಷಕ ಸಾಹಿತಿ ವಾಯ್.ಬಿ.ಕಡಕೋಳ, ರಾಜು ಈರ್ಪ ಹಟ್ಟಿ, ಸಮಾಜ ಸೇವಕ ಸೋಮಲಿಂಗ ಮದನಬಾವಿ, ಆಕಾಶವಾಣಿ ಕಾರ್ಯಕ್ರಮ ನಿರ್ವಹಣಾಧಿಕಾರಿ ಸದಾನಂದ ಪೆರ್ಲ, ಜಿಲ್ಲಾ, ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಯ್ಯ ಗುತ್ತೇದಾರ, ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳುಂಡಗಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ್ ತೇಗಲತಿಪ್ಪಿ, ಡಾ. ರವಿಕಾಂತಿ ಕ್ಯಾತನಾಳ, ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪತ್ರಿಕೆಯೊಂದರ ಉಪಸಂಪಾದಕರಾದ ರಶ್ಮಿ ಹಾಗೂ ಕಲಬುರಗಿ ಜಿಲ್ಲೆಯ ಜಿಲ್ಲಾ ಆಪರ ಸರಕಾರಿ ವಕೀಲರಾದ ಶರಣಮ್ಮ ಪಾಟೀಲ ಉಪನ್ಯಾಸ ನೀಡಿದರು. ನಾಗರತ್ನ ಹಾಗೂ ರೇಣುಕಾ ನಿರೂಪಣೆ ಮಾಡಿದರು.ರಾಜ್ಯ ಪ್ರಧಾನ ಕಾರ್ಯದರ್ಶಿ ಗಳಾದ ಡಾ. ಶೈಲಜಾ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯ ಮಹಿಳಾ ನೌಕರರ ಸಂಘದ ಅಧ್ಯಕ್ಷೆ ರಮಾ ಮಹಿಳಾ ಸಂಘಟನೆ ಬೆಳವಣಿಗೆ ಮಹತ್ವ ಕುರಿತು ಮಾತನಾಡಿದರು. ಜಮುನಾ ಟಿಳೆ ವಂದಿಸಿದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 