ರಾಯಬಾಗ: ಪಟ್ಟಣದ ಶಾಸಕರ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ
Rayabagh: Press conference at the town MLA's home office
ರಾಯಬಾಗ 01: ಚಿಕ್ಕೋಡಿ ಕೇಶವ ಕಲಾ ಭವನದಲ್ಲಿ ಎ.3 ರಿಂದ 5 ರವರೆಗೆ ನಡೆಯಲಿರುವ ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದಲ್ಲಿ ಬಿಜೆಪಿ ಪಕ್ಷದ ರಾಯಬಾಗ ಮಂಡಲದ ಪದಾಧಿಕಾರಿಗಳು, ಬಿ.ಎಲ್.ಒಗಳು, ಕಾರ್ಯಕರ್ತರು, ಮಹಿಳಾ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಯುವ ಧುರೀಣ ಅರುಣ ಐಹೊಳೆ ಹೇಳಿದರು.ಬುಧವಾರ ಪಟ್ಟಣದ ಶಾಸಕರ ಗೃಹ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಶಿಕ್ಷಣ ಅಭಿಯಾನದಲ್ಲಿ ಬಿಜೆಪಿ ಪಕ್ಷ ನಡೆದು ಬಂದ ದಾರಿ, ಪಕ್ಷ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು, ಪ್ರಧಾನಿ ನರೇಂದ್ರ ಮೋದಿಯವರು ಹಾಕಿಕೊಟ್ಟ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿಸಿದರು.ಈ ಪ್ರಶಿಕ್ಷಣ ಅಭಿಯಾನದಲ್ಲಿ ಹಿರಿಯ ರಾಜಕಾರಣಿಗಳಾದ ರಮೇಶ ಕತ್ತಿ, ಅಣ್ಣಾಸಾಹೇಬ ಜೊಲ್ಲೆ, ಶಾಸಕ ಡಿ.ಎಮ್.ಐಹೊಳೆ, ಸಂಜಯ ಪಾಟೀಲ ಸೇರಿ ಅನೇಕ ಹಿರಿಯ ಧುರೀಣಿಯರು ಪಾಲ್ಗೊಳ್ಳಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಭಾಗವಹಿ ಅಭಿಯಾನ ಯಶಸ್ಸುಗೊಳಿಸಬೇಕೆಂದು ಕರೆ ನೀಡಿದರು.ಸುದ್ದಿಗೋಷ್ಠಿಯಲ್ಲಿ ರಾಯಬಾಗ ಮಂಡಲ ಅಧ್ಯಕ್ಷ ಪೃಥ್ವಿರಾಜ ಜಾಧವ, ಸದಾಶಿವ ಘೋರೆ್ಡ, ಸದಾನಂದ ಹಳಿಂಗಳಿ, ಮಹೇಶ ಕರಮಡಿ, ಮಾರುತಿ ಬಂತೆ, ಅನೀಲ ಕೊರವಿ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 