ಓದಿನಿಂದ ಜ್ಞಾನದ ವಿಸ್ತಾರ : ಪ್ರಭು ಸೊಪ್ಪಿನ
Reading expands knowledge: Prabhu Soppina
ಓದಿನಿಂದ ಜ್ಞಾನದ ವಿಸ್ತಾರ : ಪ್ರಭು ಸೊಪ್ಪಿನ
ಲೋಕದರ್ಶನ ವರದಿ
ಹೂವಿನಹಡಗಲಿ 03: ನಿರಂತರ ಓದಿನಿಂದ ಜ್ಞಾನದ ವಿಸ್ತಾರ ಆಗುತ್ತದೆ ಎಂದು ಪ್ರಗತಿಪರ ಕೃಷಿಕ ಉಪನ್ಯಾಸಕ ಪ್ರಭು ಸೊಪ್ಪಿನ ಅಭಿಮತ ವ್ಯಕ್ತಪಡಿಸಿದರು.ತಾಲ್ಲೂಕಿನ ಸೋಗಿ ಗ್ರಾಮದ ಪಟ್ಟೇದ ಸಿದ್ಧಮಲ್ಲಪ್ಪ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಥಿಗಳು ಜ್ಞಾನದ ಹಸಿವನ್ನು ಇರಿಸಿಕೊಂಡು ತರಗತಿಗೆ ಬಂದಾಗ ಮಾತ್ರ ವಿದ್ಯಾರ್ಥಿ ಜೀವನ ಸಾರ್ಥಕತೆ ಎಂದರು.ಪ್ರಾಚಾರ್ಯರಾದ ಎಸ್. ಜ್ಯೋತಿ ಅಧ್ಯಕ್ಷತೆ ವಹಿಸಿದ್ದರು. ಸಿಡಿಸಿ ಸದಸ್ಯರಾದ ವಿನಯ್, ಕೊಟ್ರೇಶ್, ಸವಿತಾ, ಲಕ್ಕಪ್ಪ ಭಾಗವಹಿಸಿದ್ದರು. ನಿವೃತ್ತ ಪ್ರಾಚಾರ್ಯ ಬಿ. ಕಾಳೇಶ್, ವರ್ಗಾವಣೆಗೊಂಡ ಇತಿಹಾಸ ಉಪನ್ಯಾಸಕ ದುಷ್ಯಂತ ಇವರನ್ನು ಸನ್ಮಾನಿಸಲಾಯಿತು. ಕಳೆದ ಸಾಲಿನಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಉಪನ್ಯಾಸಕರಾದ ವೆಂಕಟೇಶ್, ನರೇಶ್, ಪರಶುರಾಮ ನಾಗೋಜಿ, ಶಬೀನ, ನಟರಾಜ್, ಮಧುನಾಯ್ಕ್, ಶಂಕರ್, ಅಜರುದ್ದಿನ್ ಭಾಗವಹಿಸಿದ್ದರು. ಉಪನ್ಯಾಸಕ ಜಯಪ್ರಕಾಶ್ ನಾರಾಯಣ್ ಕಾರ್ಯಕ್ರಮ ನಿರ್ವಹಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 