ರೆಡ್ ಕ್ರಾಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ
Red Cross membership drive launched
ಲೋಕದರ್ಶನ ವರದಿ
ತಾಲೂಕು ಸಮಿತಿ ಶೀಘ್ರ ರಚನೆ: ತಹಶೀಲ್ದಾರ್ ಗಣೇಶ್ ಸವಣೂರು
ಸವಣೂರು 6: ತಾಲೂಕಿನ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸದಸ್ಯತ್ವವನ್ನು ಹೆಚ್ಚಿಸಿ, ಶೀಘ್ರದಲ್ಲೇ ತಾಲೂಕು ಸಮಿತಿಯನ್ನು ರಚಿಸಲಾಗುವುದು ಎಂದು ಗ್ರೇಡ್-2 ತಹಶೀಲ್ದಾರ್ ಗಣೇಶ್ ಸವಣೂರು ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ತಾಲೂಕು ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರೆಡ್ ಕ್ರಾಸ್ ಸಂಸ್ಥೆ ಮಾನವೀಯ ಸೇವೆಯ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ನೀಡುತ್ತಿದೆ. ಸಂಸ್ಥೆಯ ಚಟುವಟಿಕೆಗಳನ್ನು ತಾಲೂಕಿನಲ್ಲಿ ಮತ್ತಷ್ಟು ವಿಸ್ತರಿಸಲು ಹೆಚ್ಚಿನ ಸದಸ್ಯತ್ವ ಅಗತ್ಯವಿದೆ. ಇದರಿಂದ ಜಿಲ್ಲೆಯಲ್ಲಿರುವ ವಿವಿಧ ಸೇವಾ ಸೌಲಭ್ಯಗಳನ್ನು ತಾಲೂಕಿನ ಜನರು ಪರಿಣಾಮಕಾರಿಯಾಗಿ ಪಡೆಯಲು ಅನುಕೂಲವಾಗಲಿದೆ ಎಂದು ಹೇಳಿದರು.
ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಗೌರವ ಕಾರ್ಯದರ್ಶಿ ನಿಂಗಪ್ಪ ಎಂ. ಆರೆರ್ ಮಾತನಾಡಿ, ಜಿಲ್ಲಾ ಕೇಂದ್ರದಲ್ಲಿ ಬ್ಲಡ್ ಬ್ಯಾಂಕ್ ಕಟ್ಟಡ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ರೆಡ್ ಕ್ರಾಸ್ ಮೂಲಕ ಜನಸೇವೆಗೆ ಉತ್ತಮ ಅವಕಾಶಗಳಿದ್ದು, ಸವಣೂರು ತಾಲೂಕಿನ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆದು ಸಂಸ್ಥೆಯ ಸೇವಾ ಕಾರ್ಯಗಳಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಗಣೇಶ್ ಸವಣೂರು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ, ಸದಸ್ಯತ್ವ ಪಡೆದವರಿಗೆ ಗುರುತಿನ ಚೀಟಿ ವಿತರಿಸಿದರು. ಈ ಸಂದರ್ಭದಲ್ಲಿ ಕಂದಾಯ ಅಧಿಕಾರಿ ಆರಿ್ಬ. ಮಾಚಕನೂರು, ಡಿಡಿಆರ್ಸಿ ನೋಡಲ್ ಅಧಿಕಾರಿ ಶ್ರೀಮತಿ ಪೂರ್ಣಿಮಾ ಮಠದ, ರೆಡ್ ಕ್ರಾಸ್ ಸದಸ್ಯರಾದ ಶಿವಕುಮಾರ ಹಿರೇಮಠ, ನಿಂಗನಗೌಡ ದೊಡ್ಡಗೌಡ್ರ, ರಾಜಶೇಖರ ಗುರುಸ್ವಾಮಿಮಠ, ಮಾಲತೇಶ ಹೊಳೆಮ್ಮನವರ, ಎನ್‌ಆರ್ಡಬ್ಲ್ಯು ಸಿಬ್ಬಂದಿ ಶಿವಪ್ಪ ಏರೇಶಿಮಿ, ಈರಯ್ಯ ಹಿರೇಮಠ, ಇರ್ಷಾದ್ ದುಂಡಸಿ, ಫಕ್ಕೀರೇಶ ಬಾಕಿ, ಸಿದ್ದಪ್ಪ ಕ್ಯಾಲಕೊಂಡ, ಸುರೇಶ್ ಕಳ್ಳಿಮನಿ ಸೇರಿದಂತೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ, ಬೀದಿನಾಯಿಗಳ ಸಮಸ್ಯೆಗೆ ಪರಿಹಾರ ನೀಡಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ 