ಸಾಂಬ್ರಾ ವಿಮಾನ ನಿಲ್ದಾಣ 8 ಕಿಮೀ ಸುತ್ತಮುತ್ತಲಿನ ಪ್ರದೇಶಕ್ಕೆ ರೆಡ್ ಜೋನ್ ಘೋಷಣೆ
Red zone declared for 8 km area around Sambra airport
ಬೆಳಗಾವಿ 05 : ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಜರೇಯ ಯಡೂರ ಕ್ಷೇತ್ರದ ವಿರಭದ್ರೆಶ್ವರ ದೇವಸ್ಥಾನದ ರಾಜಗೋಪುರ, ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆಗೆ ಉಪರಾಷ್ಟ್ರಪತಿ, ರಾಜ್ಯ ಪಾಲಕರು ಆಗಮನ ಹಿನ್ನೆಲೆಯಲ್ಲಿ ಸಾಂಬ್ರಾ ವಿಮಾನ ನಿಲ್ದಾಣದ 8 ಕಿಮೀ ಪ್ರದೇಶದ ಸುತ್ತಮುತ್ತಲಿನ ಪ್ರದೇಶಕ್ಕೆ ರೇಡ್ ಜೋನ್ ಘೋಷಣೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬೂಷಣ ಬೋರಸೆ ಅವರು ತಿಳಿಸಿದ್ದಾರೆ. ನಾಗರಿಕ ವಿಮಾನಯಾನ ಮಹಾ ನಿರ್ದೇಶಕರು (ಆಉಅಂ) ಈಗಾಗಲೇ ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವ್ಯಾಪ್ತಿಯನ್ನು ರೆಡ್ ಜೋನ್ (ರೆಡ್ ಜೋನ್) ಎಂದು ಘೋಷಿಸಲಾಗಿದೆ. ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ (ರೆಡ್ ಜೋನ್/ಯೆಲ್ಲೋ ಜೋನ್) ಯಾವುದೇ ರೀತಿಯ ಡ್ರೋನ್ /ಅನಮ್ಯಾನಡ್ ಏರಿಯಲ್ ವಾಹನ ಡ್ರೋನ್ ಹಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ಆದೇಶ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ಕಟ್ಟೆಚರ ವಹಿಸಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 