ವಿಜಯಪುರ

ವಿಜಯಪುರದಿಂದ ರೆಡ್ಡಿ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ

ವಿಜಯಪುರದಿಂದ ರೆಡ್ಡಿ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ


ದೇವರಹಿಪ್ಪರಗಿ ಸೆ.25: ರೆಡ್ಡಿ ಸಮಾಜದ ರಾಜ್ಯಮಟ್ಟದ ಅಭಿನಂದನಾ ಸಮಾರಂಭವನ್ನು ಯಶಸ್ವಿಗೊಳಿಸಲು ವಿಜಯಪುರ ಜಿಲ್ಲೆಯಿಂದ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ವೀರಶೈವ ರೆಡ್ಡಿ ಸಮಾಜದ ಜಿಲ್ಲಾಧ್ಯಕ್ಷ ಸಂಗನಗೌಡ ಶಿವಶರಣ ಹೆಮರೆಡ್ಡಿ ಮಲ್ಲಮ್ಮ ಮನವಿ ಮಾಡಿದರು.  

ಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಹಾಗೂ ಧಾರವಾಡ ಜಿಲ್ಲಾ ಘಟಕದ ಸಹಯೋಗದಲ್ಲಿ ಸೆ.27ರಂದು ಬೆಳಿಗ್ಗೆ 10.30ಕ್ಕೆ ಹುಬ್ಬಳ್ಳಿಯ ಸುತ್ತೂರು ಶ್ರೀ ವೀರೇಂದ್ರ ಹೆಗಡೆ ಕಲಾಕ್ಷೇತ್ರದಲ್ಲಿ ರಾಜ್ಯಮಟ್ಟದ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.  

ಸಮಾಜದ ಸಂಘಟನೆ, ಒಗ್ಗಟ್ಟು ಹಾಗೂ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೆ ಇಂತಹ ಸಮಾವೇಶಗಳು ಮಹತ್ವದ ವೇದಿಕೆಯಾಗಿವೆ. ರಾಜ್ಯಮಟ್ಟದ ಪದಾಧಿಕಾರಿಗಳು, ಶ್ರೀಗಳು, ಸಚಿವರು ಹಾಗೂ ಸಮಾಜದ ಮುಖಂಡರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದರು.  

ವಿಜಯಪುರ ಜಿಲ್ಲೆಯ ವಿವಿಧ ತಾಲೂಕುಗಳಿಂದ ಸಮಾಜದ ಮುಖಂಡರು, ಪದಾಧಿಕಾರಿಗಳು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾರಂಭದ ಯಶಸ್ಸಿಗೆ ಸಹಕರಿಸಬೇಕು. ಸಮಾಜದ ಎಲ್ಲ ಬಂಧುಗಳು ಒಗ್ಗಟ್ಟಿನಿಂದ ಪಾಲ್ಗೊಂಡು ತಮ್ಮ ಸಂಘಟನಾ ಶಕ್ತಿ ಪ್ರದರ್ಶಿಸಬೇಕು ಎಂದು ಸಂಗನಗೌಡ ಮನವಿ ಮಾಡಿದರು. 


ಸುದ್ದಿ ಓದಿ