ಬೆಳಗಾವಿ

ಹಾನಗಲ್ಲ ಕುಮಾರ ಶಿವಯೋಗಿಗಳ ಜೀವನ ಸಾಧನೆ ಕುರಿತು ಅನುಭಾವ

ಹಾನಗಲ್ಲ ಕುಮಾರ ಶಿವಯೋಗಿಗಳ ಜೀವನ ಸಾಧನೆ ಕುರಿತು ಅನುಭಾವ


ಬೆಳಗಾವಿ 1: ಶಿವಬಸವನಗರದ ಕಾರಂಜಿಮಠದ ಶಿವಾನುಭವ ಮಂಟಪದಲ್ಲಿ ಅ.5ರಂದು ಸಂಜೆ 6 ಗಂಟೆಗೆ 304ನೇ ಶಿವಾನುಭವ ಕಾರ್ಯಕ್ರಮ ನಡೆಯಲಿದೆ.  ಕಾರಂಜಿಮಠದ ಪೂಜ್ಯ ಮ.ನಿ.ಪ್ರ. ಗುರುಸಿದ್ಧ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಹುಕ್ಕೇರಿ ವಿರಕ್ತಮಠದ ಮ.ನಿ.ಪ್ರ. ಶಿವಬಸವ ಮಹಾಸ್ವಾಮಿಗಳು ‘ಹಾನಗಲ್ಲ ಕುಮಾರ ಶಿವಯೋಗಿಗಳ ಜೀವನ ಸಾಧನೆ ಹಾಗೂ ಸಮಾಜಕ್ಕೆ ನೀಡಿದ ಕೊಡುಗೆ’ ಕುರಿತು ಅನುಭಾವ ನೀಡಲಿದ್ದಾರೆ.  

ಲಿಂಗರಾಜ ಕಾಲೇಜಿನ ವಿಶ್ರಾಂತ ಪ್ರಾಚಾರ್ಯ ಪ್ರೊ. ಎಂ.ಎಸ್‌. ಇಂಚಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ 2026ನೇ ಸಾಲಿನ ರಾಜ್ಯಮಟ್ಟದ ‘ಶಿಕ್ಷಣ ಸೇವಾ ರತ್ನ’ ಪ್ರಶಸ್ತಿ ಪಡೆದ ಕಿರಣ ಚೌಗಲಾ ಅವರನ್ನು ಶ್ರೀಮಠದ ವತಿಯಿಂದ ಸನ್ಮಾನಿಸಲಾಗುವುದು.  ಕಾರಂಜಿಮಠದ ಕುಮಾರೇಶ್ವರ ಸಂಗೀತ ಪಾಠಶಾಲೆಯ ಮಕ್ಕಳಿಂದ ಪ್ರಾರ್ಥನೆ ನಡೆಯಲಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ. 


ಸುದ್ದಿ ಓದಿ