ಕಾರವಾರ

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಿ: ಯುವಜನತೆಗೆ ಜಾಗೃತಿ

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಿ: ಯುವಜನತೆಗೆ ಜಾಗೃತಿ

ಲೋಕದರ್ಶನ ವರದಿ 

ಕಾರವಾರ 10: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಯುವಜನತೆ ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡು, ಮತದಾನದ ಮೂಲಕ ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದೀಲೀಷ್ ಶಶಿ ಹೇಳಿದರು.  

ಶುಕ್ರವಾರ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಹಿ2026್ಘ ಅಂಗವಾಗಿ ವಿದ್ಯಾರ್ಥಿಗಳ ಮೂಲಕ ಪೋಷಕರಲ್ಲಿ ಮತದಾರರ ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರವಾರದ ಹಿಂದುಳಿದ ವರ್ಗಗಳ ಪೋಸ್ಟ್‌ ಮೆಟ್ರಿಕ್ ವಿದ್ಯಾರ್ಥಿನಿಲಯದಲ್ಲಿ ಆಯೋಜಿಸಿದ್ದ ಪತ್ರ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.  

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಅಂಗವಾಗಿ ಈಗಾಗಲೇ ಬಿಎಲ್‌ಒಗಳು ಮನೆಮನೆಗೆ ತೆರಳಿ ಎಣಿಕೆ ನಮೂನೆಗಳನ್ನು ವಿತರಿಸಿದ್ದು, ಅವುಗಳನ್ನು ಭರ್ತಿ ಮಾಡಿ ಸಹಿ ಹಾಕಿ ಕಡ್ಡಾಯವಾಗಿ ಹಿಂತಿರುಗಿಸುವಂತೆ ಪೋಷಕರಿಗೆ ಮನವಿ ಮಾಡುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು.  

ಮತದಾರರ ಪಟ್ಟಿಯಲ್ಲಿ ಹೆಸರು ಇರುವುದೇ ಮತದಾನದ ಮೊದಲ ಹಂತವಾಗಿದ್ದು, 18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬರೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರೆ​‍್ಡ ಮಾಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.  

ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳ ಸುಮಾರು 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ತಮ್ಮ ಪೋಷಕರಲ್ಲಿ ಜಾಗೃತಿ ಮೂಡಿಸುವ ಸಂಕಲ್ಪ ವ್ಯಕ್ತಪಡಿಸಿದರು.  

ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೇಸ್ತ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳು ಹಾಗೂ ವಿದ್ಯಾರ್ಥಿನಿಲಯದ ವಾರ್ಡನ್ ಸೇರಿದಂತೆ ಇತರರು ಉಪಸ್ಥಿತರಿದ್ದರು. 


ಸುದ್ದಿ ಓದಿ