ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಿ: ಯುವಜನತೆಗೆ ಜಾಗೃತಿ
Register your name in the voters' list: Awareness for the youth
ಲೋಕದರ್ಶನ ವರದಿ
ಕಾರವಾರ 10: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಯುವಜನತೆ ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡು, ಮತದಾನದ ಮೂಲಕ ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದೀಲೀಷ್ ಶಶಿ ಹೇಳಿದರು.
ಶುಕ್ರವಾರ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಹಿ2026್ಘ ಅಂಗವಾಗಿ ವಿದ್ಯಾರ್ಥಿಗಳ ಮೂಲಕ ಪೋಷಕರಲ್ಲಿ ಮತದಾರರ ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರವಾರದ ಹಿಂದುಳಿದ ವರ್ಗಗಳ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿನಿಲಯದಲ್ಲಿ ಆಯೋಜಿಸಿದ್ದ ಪತ್ರ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಅಂಗವಾಗಿ ಈಗಾಗಲೇ ಬಿಎಲ್‌ಒಗಳು ಮನೆಮನೆಗೆ ತೆರಳಿ ಎಣಿಕೆ ನಮೂನೆಗಳನ್ನು ವಿತರಿಸಿದ್ದು, ಅವುಗಳನ್ನು ಭರ್ತಿ ಮಾಡಿ ಸಹಿ ಹಾಕಿ ಕಡ್ಡಾಯವಾಗಿ ಹಿಂತಿರುಗಿಸುವಂತೆ ಪೋಷಕರಿಗೆ ಮನವಿ ಮಾಡುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಮತದಾರರ ಪಟ್ಟಿಯಲ್ಲಿ ಹೆಸರು ಇರುವುದೇ ಮತದಾನದ ಮೊದಲ ಹಂತವಾಗಿದ್ದು, 18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬರೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರೆ್ಡ ಮಾಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳ ಸುಮಾರು 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ತಮ್ಮ ಪೋಷಕರಲ್ಲಿ ಜಾಗೃತಿ ಮೂಡಿಸುವ ಸಂಕಲ್ಪ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೇಸ್ತ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳು ಹಾಗೂ ವಿದ್ಯಾರ್ಥಿನಿಲಯದ ವಾರ್ಡನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 