ಬಳ್ಳಾರಿ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ ಮತ್ತು ಜೋಳ ಬೆಳೆ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ ಮತ್ತು ಜೋಳ ಬೆಳೆ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆ

ಬಳ್ಳಾರಿ24 :ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ 2023-24ನೇ ಸಾಲಿನಲ್ಲಿ ಭತ್ತ, ರಾಗಿ, ಜೋಳ ಬೆಳೆಗಳನ್ನು ರೈತರಿಂದ ನೇರವಾಗಿ ಖರೀದಿಸಲು ಡಿ.01ರಿಂದ ರೈತರ ನೊಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಜಿಲ್ಲಾ ಟಾಸ್ಕ್‌ ಫೋರ್ಸ್‌ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. 

ರೈತರ ನೊಂದಣಿ ಪ್ರಕ್ರಿಯೆಯು ರಾಗಿ ಮತ್ತು ಜೋಳ ಬೆಳೆಗಳಿಗೆ ಡಿ.01ರಿಂದ ನಡೆಯಲಿದ್ದು, ಭತ್ತ ಬೆಳೆಗೆ ಈಗಾಗಲೇ ಆರಂಭವಾಗಿದೆ ಹಾಗೂ ಕೃಷಿ ಉತ್ಪನ್ನಗಳ ಖರೀದಿ ಪ್ರಕ್ರಿಯೆಯು 2024ನೇ ಜನವರಿ 1ರಿಂದ 2024ನೇ ಮಾರ್ಚ್‌ 31ರವರೆಗೆ ನಡೆಯಲಿದೆ. 

ಕೃಷಿ ಉತ್ಪನ್ನಗಳಾದ ಸಾಮಾನ್ಯ ಭತ್ತಕ್ಕೆ (ಪ್ರತಿ ಕ್ವಿಂಟಲ್‌ಗೆ) ರೂ.2183, ಗ್ರೇಡ್ ಎ-ಭತ್ತಕ್ಕೆ ರೂ.2203, ರಾಗಿಗೆ ರೂ.3846, ಹೈಬ್ರೀಡ್‌-ಬಿಳಿ ಜೋಳಕ್ಕೆ ರೂ.3180, ಮಾಲ್ದಂಡಿ-ಬಿಳಿ ಜೋಳಕ್ಕೆ ರೂ.3225 ಕನಿಷ್ಠ ಬೆಂಬಲ ಬೆಲೆಗಳಾಗಿವೆ.  

ಬೆಂಬಲ ಬೆಲೆ ಯೋಜನೆಯಡಿ ಕೃಷಿ ಉತ್ಪನ್ನವನ್ನು ಮಾರಾಟ ಮಾಡಲು ರೈತರು ಮೊದಲು ಕೃಷಿ ಇಲಾಖೆಯಲ್ಲಿ ಫ್ರೂಟ್ಸ್‌ ತಂತ್ರಾಂಶದಲ್ಲಿ ನೊಂದಣಿ ಮಾಡಿಕೊಳ್ಳಬೇಕು. ಆಯಾ ತಾಲ್ಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ, ತಾಲೂಕು ಕೃಷಿ ಉತ್ಪನ್ನ ಸಹಕಾರ  ಮಾರಾಟ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತಾಲೂಕು ಕೇಂದ್ರ ಕಚೇರಿಗಳಲ್ಲಿ ತೆರೆಯಲಾಗುವ ಖರೀದಿ ಕೇಂದ್ರಗಳಲ್ಲಿ ಭತ್ತ, ರಾಗಿ, ಜೋಳ ಮಾರಾಟ ಮಾಡಲು ನೊಂದಾಯಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ. 

*ನೊಂದಣಿ ಮತ್ತು ಖರೀದಿ ಕೇಂದ್ರಗಳ ವಿವರ:* 

ಬಳ್ಳಾರಿಯ ತಾಲ್ಲೂಕಿನ ಎಪಿಎಂಸಿ ಯಾರ್ಡ್‌, ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ ಹಾಗೂ ಎಸ್‌ಡಬ್ಲ್ಯೂಸಿ ಗೋದಾಮು-01 ಮತ್ತು 02. ಕುರುಗೋಡು ತಾಲ್ಲೂಕಿನ ಎಪಿಎಂಸಿ ಯಾರ್ಡ್‌, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ. ಸಿರುಗುಪ್ಪ ತಾಲ್ಲೂಕಿನ ಎಪಿಎಂಸಿ ಯಾರ್ಡ್‌, ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ. ಸಂಡೂರು ತಾಲ್ಲೂಕಿನ ಎಪಿಎಂಸಿ ಯಾರ್ಡ್‌, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಕಂಪ್ಲಿ ತಾಲ್ಲೂಕಿನ ಎಪಿಎಂಸಿ ಯಾರ್ಡ್‌, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ನೊಂದಣಿ ಮತ್ತು ಖರೀದಿ ಕೇಂದ್ರಗಳಾಗಿವೆ. 

*ಖರೀದಿ ಅಧಿಕಾರಿಗಳು ಮತ್ತು ಗ್ರೇಡರ್‌ಗಳು:* 

ಬಳ್ಳಾರಿಯ ತಾಲ್ಲೂಕಿನ ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘದ ನರಸಿಂಹ ಅವರ ಮೊ.900677875 ಹಾಗೂ ಬಳ್ಳಾರಿ ರೈತ ಸಂಪರ್ಕ ಕೇಂದ್ರದ ಸಹಾಯಕ ಕೃಷಿ ಅಧಿಕಾರಿ ಸುಷ್ಮಾ ಅವರ ಮೊ.8277930412, ಕುರುಗೋಡಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಹುಸೇನ್ ಸಾಬ್ ಅವರ ಮೊ.8951307333 ಹಾಗೂ ಸಹಾಯಕ ತೋಟಗಾರಿಕೆ ಅಧಿಕಾರಿ ರಾಘವೇಂದ್ರ ಅವರ ಮೊ.9740775129. 

ಸಿರುಗುಪ್ಪ ತಾಲ್ಲೂಕಿನ ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘದ ಅಧ್ಯಕ್ಷ ಮೋಹನ್‌ಗೌಡ ಅವರ ಮೊ.9731421918 ಹಾಗೂ ತೆಕ್ಕಲಕೋಟೆಯ ಕೃಷಿ ಅಧಿಕಾರಿ ಹೇಮಲ ನಾಯಕ್ ಅವರ ಮೊ.9902751026, ಸಂಡೂರಿನ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಶಿವಲಿಂಗಪ್ಪ ಅವರ ಮೊ.9980676497 ಹಾಗೂ ಕೃಷಿ ಅಧಿಕಾರಿ ರಾಘವೇಂದ್ರ ಅವರ ಮೊ.8277930434, ಕಂಪ್ಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ರಂಗಪ್ಪ ಮೊ.9740838910, ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಕೃಷಿ ಅಧಿಕಾರಿ ಶಿವಪ್ಪ ಬಾರಿಗಿಡದ ಮಡಿವಾಳರ ಎ.ಎಸ್‌.ಅವರ ಮೊ.9611949460 ಅವರನ್ನು ಸಂಪರ್ಕಿಬಹುದಾಗಿದೆ. 

*ಸೂಚನೆಗಳು:* 

ಎಲ್ಲಾ ಹೋಬಳಿ ಮಟ್ಟದ ಖರೀದಿ ಕೇಂದ್ರಗಳಲ್ಲಿ ಆನ್‌ಲೈನ್ ಮುಖಾಂತರ ರೈತರ ನೊಂದಣಿಯನ್ನು ಮಾಡಲಾಗುವುದು. ಖರೀದಿ ಕೇಂದ್ರಕ್ಕೆ ರೈತರು ಕೃಷಿ ಇಲಾಖೆಯಿಂದ ಪಡೆದಿರುವ ಅವರ ಫ್ರೂಟ್ಸ್‌ ಐ.ಡಿ. (ರೈತರ ನೊಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ (ಈಚಿಡಿಟಜಡಿ ಖಜರಣಡಿಚಿಣಠ ಚಿಟಿಜ ಗಟಿಜಿಜಜ ಃಜಟಿಜಜಿಛಿಚಿಡಿಥಿ ಋಜಿಠಟಚಿಣಠ ಖಥಿಣಜಟ- ಈಖಗಋಖ) ಮತ್ತು ಆಧಾರ್‌ನೊಂದಿಗೆ ನೊಂದಣಿ ಕೇಂದ್ರಕ್ಕೆ ಬರಬೇಕು. ಬೆಂಬಲ ಬೆಲೆಗಾಗಿ ರೈತರನ್ನು ಪ್ರತ್ಯೇಕವಾಗಿ ನೊಂದಾಯಿಸದೇ ಕೇವಲ ಅವರ ಫ್ರೂಟ್ಸ್‌ ಐ.ಡಿ.ಯ ಮೂಲಕ ಖರೀದಿಗೆ ನೊಂದಾಯಿಸಲಾಗುತ್ತದೆ. 

ರೈತರ ಫ್ರೂಟ್ಸ್‌ ಐ.ಡಿ ಯನ್ನು ಪ್ರಸ್ತಕ ಸಾಲಿನಲ್ಲಿ ರೈತರಿಂದ ಫ್ರೂಟ್ಸ್‌ ಐ.ಡಿ ಪಡೆಯುವುದು ಕಡ್ಡಾಯ. ರೈತರ ಬಳಿ ಫ್ರೂಟ್ಸ್‌ ಐ.ಡಿ ಇಲ್ಲದಿದ್ದಲ್ಲಿ ಅಥವಾ ಅವರ ಫ್ರೂಟ್ಸ್‌ ಐ.ಡಿ ಮಾಹಿತಿ ಪರಿಷ್ಕರಿಸಲು ಕೃಷಿ ಇಲಾಖೆಯನ್ನು ಸಂಪರ್ಕಿಸಿ ಸರಿಪಡಿಸಿಕೊಳ್ಳಬೇಕು. 

ಪ್ರತಿಯೊಬ್ಬ ರೈತರ ಫ್ರೂಟ್ಸ್‌ ಐ.ಡಿ. ನಮೂದಿಸಿದ ನಂತರ ಫ್ರೂಟ್ಸ್‌ ದತ್ತಾಂಶದಿಂದ ರೈತರ ಅಗತ್ಯ ಮಾಹಿತಿ ಲಭ್ಯವಾಗಲಿದೆ. ಮಾಹಿತಿಯಲ್ಲಿ ರೈತರ ಹೆಸರು, ವಿಳಾಸ, ಜಾತಿ, ವಯಸ್ಸು, ಮೊಬೈಲ್ ಸಂಖ್ಯೆ, ಜಮೀನು ಮತ್ತು ಬೆಳೆದಿರುವ ಬೆಳೆಯ ವಿವರಗಳು ಹಾಗೂ ರೈತರ ಬ್ಯಾಂಕ್ ಖಾತೆಯ ವಿವರಗಳು ಲಭ್ಯವಿರುತ್ತವೆೆ. ಹಾಗಾಗಿ ಪ್ರತ್ಯೇಕವಾಗಿ ಬೇರೆ ಯಾವುದೇ ದಾಖಲೆ ನೀಡುವ ಅವಶ್ಯಕತೆ ಇರುವುದಿಲ್ಲ. ಫ್ರೂಟ್ಸ್‌ ದತ್ತಾಂಶದನ್ವಯ ರೈತರ ಬೆಳೆ ಸಮೀಕ್ಷೆ ವಿವರದಂತೆ ಬೆಳೆ ವಿಸ್ತೀರ್ಣಕ್ಕನುಗುಣವಾಗಿ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಬಹುದಾದ ಗರಿಷ್ಠ ಪ್ರಮಾಣವನ್ನು ತೋರಿಸಲಾಗುವುದು. 

ಖರೀದಿ ಕೇಂದ್ರಗಳಲ್ಲಿ ನೊಂದಣಿ ಮಾಡಿದಾಗ ರೈತರಿಗೆ ತಮ್ಮ ಜಮೀನು ಮತ್ತು ಬೆಳೆ ವಿವರ ನೋಡಲು ಅವಕಾಶವಿದೆ. ರೈತರು ಖರೀದಿ ವಿವರಗಳನ್ನು ಒಪ್ಪಿ ನಮೂದಿಸಿದ ನಂತರ ಸ್ವೀಕೃತಿಯನ್ನು ಮುದ್ರಿಸಿ ರೈತರರಿಗೆ ನೀಡಲಾಗುವುದು. ರೈತರು ಭತ್ತ, ರಾಗಿ, ಜೋಳ ಸರಬರಾಜು ಮಾಡುವಾಗ ಎಫ್‌.ಎ.ಕ್ಯೂ ಗುಣಮಟ್ಟವನ್ನು ಪರೀಶೀಲಿಸಿ ಖರೀದಿಸಲಾಗುವುದು. 

*ಬೆಳೆಗಳ ಖರೀದಿ ಮಿತಿ:* 

ಭತ್ತವನ್ನು ಪ್ರತಿ ರೈತರಿಂದ ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ 25 ಕ್ವಿಂಟಾಲ್‌ನಂತೆ ಗರಿಷ್ಠ 40 ಕ್ವಿಂಟಾಲ್ ಮೀರದಂತೆ ಖರೀದಿಸಲಾಗುವುದು. ಜೋಳವನ್ನು ಪ್ರತಿ ರೈತರಿಂದ ಉತ್ಪಾದನೆಗೆ ಅನುಗುಣವಾಗಿ  ಪ್ರತಿ ಎಕರೆಗೆ 10 ಕ್ವಿಂಟಾಲ್‌ನಂತೆ ಎಲ್ಲಾ ರೈತರಿಂದ ಅವರು ಹೊಂದಿರುವ ಜಮೀನಿಗೆ ಅನುಗುಣವಾಗಿ ಖರೀದಿಸಲಾಗುವುದು. 

ರಾಗಿಯನ್ನು ಸಣ್ಣ ಮತ್ತು ಅತಿ ಸಣ್ಣ ರೈತರಿಂದ ಪ್ರತಿ ಎಕರೆಗೆ 10 ಕ್ವಿಂಟಾಲ್‌ನಂತೆ ಎಲ್ಲಾ ರೈತರಿಂದ ಅವರು ಹೊಂದಿರುವ ಜಮೀನಿಗೆ ಅನುಗುಣವಾಗಿ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. 

*ಹಣಪಾವತಿ:* 

ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ, ಜೋಳ ಸರಬರಾಜು ಮಾಡಿದ ರೈತರಿಗೆ ಅವರು ಕೃಷಿ ಇಲಾಖೆಯಲ್ಲಿ ನೊಂದಾಯಿಸಿಕೊಂಡಿರುವ ಬ್ಯಾಂಕ್ ಖಾತೆಗೆ ಆರ್‌.ಟಿ.ಜಿ.ಎಸ್ ಮೂಲಕ ಹಣ ಪಾವತಿಸಲಾಗುವುದು. 

ಮಧ್ಯವರ್ತಿಗಳು, ಏಜೆಂಟರ್‌ಗಳು ಖರೀದಿ ಕೇಂದ್ರಗಳಿಗೆ ಭತ್ತವನ್ನು ತಂದಲ್ಲಿ ಅಂತಹವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಎಚ್ಚರಿಸಿದ್ದಾರೆ. 

ಬೆಂಬಲ ಬೆಲೆ ಯೋಜನೆ ಬಗ್ಗೆ ರೈತರಿಗೆ ಯಾವುದೇ ಸಮಸ್ಯೆಗಳಿದ್ದರೆ ತಾಲ್ಲೂಕಿನ ತಹಶೀಲ್ದಾರ್, ಕೃಷಿ  ಅಧಿಕಾರಿ, ಎ.ಪಿ.ಎಂ.ಸಿ ಕಾರ್ಯದರ್ಶಿ, ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಪ್ರಧಾನ ಕಾರ್ಯದರ್ಶಿ ಜಿ.ಕೆ.ವೆಂಕೆಟೇಶ ಅವರ ಮೊ.9036484002 ಹಾಗೂ ಸಹಾಯಕ ಕಾರ್ಯದರ್ಶಿ ಡಿ.ಎಂ.ಆಶಿಕ್ ಆಲಿ ಅವರ ಮೊ.9686935278 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. 

-------- 

ಕೃಷಿ ಇಲಾಖೆ: ರೈತರು ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಕರೆ 

ಬಳ್ಳಾರಿ,ನ.24:ಕೃಷಿ ಇಲಾಖೆಯಿಂದ 2023-24ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ಬೆಳೆ ವಿಮೆಗೆ ಬೆಳೆ ಸಾಲ ಪಡೆದ, ಬೆಳೆ ಸಾಲ ಪಡೆಯದ ರೈತರು ತಮ್ಮ ಬೆಳೆಗಳ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕ ಕೆ.ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ. 

ಹಿಂಗಾರು ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ನೀರಾವರಿ ಬೆಳೆಗಳಾದ ಜೋಳ, ಕಡಲೆ ಹಾಗೂ ಬೇಸಿಗೆ ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ನೀರಾವರಿ ಬೆಳೆಗಳಾದ ನೆಲಗಡಲೆ (ಶೇಂಗಾ), ಭತ್ತ ಹಾಗೂ ಹೋಬಳಿ ಮಟ್ಟದ ಹಿಂಗಾರು ಹಂಗಾಮಿನ ನೀರಾವರಿ ಬೆಳೆಗಳಾದ ಮುಸುಕಿನ ಜೋಳ, ಬೇಸಿಗೆ ಹಂಗಾಮಿನ ಸೂರ್ಯಕಾಂತಿ, ಈರುಳ್ಳಿ ಹಾಗೂ ಮಳೆಯಾಶ್ರಿತ ಬೆಳೆಗಳಾದ ಹುರುಳಿ, ಸೂರ್ಯಕಾಂತಿ, ಕುಸುಮೆ ಬೆಳೆಗಳು ಜಿಲ್ಲೆಯ ಬೆಳೆಗಳಾಗಿವೆ. 

*ಬೆಳೆ ವಿಮೆ ನೋಂದಣಿಗೆ ಕೊನೆಯ ದಿನ:* 

ಜೋಳ, ಕಡಲೆ ಬೆಳೆಗೆ ಡಿ.30, ಮುಸುಕಿನ ಜೋಳ, ಸೂರ್ಯಕಾಂತಿ, ಕುಸುಮೆ ಬೆಳೆಗಳಿಗೆ ಡಿ.15, ಹುರುಳಿ, ಈರುಳ್ಳಿ ಡಿ.01. ಬೇಸಿಗೆ ಬೆಳೆಗಳಾದ ಭತ್ತ, ನೆಲಗಡಲೆ (ಶೇಂಗಾ), ಸೂರ್ಯಕಾಂತಿ ಹಾಗೂ ಈರುಳ್ಳಿ ಬೆಳೆಗಳಿಗೆ 2024ರ ಫೆ.28ರವರೆಗೆ ಅವಕಾಶವಿದೆ. 

ಈ ಯೋಜನೆಯ ಲಾಭ ಪಡೆಯಲು ಯಾವುದೇ ಸ್ಥಳೀಯ ಬ್ಯಾಂಕ್‌ಗಳು/ಸಾರ್ವಜನಿಕ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು.  

ಹೆಚ್ಚಿನ ಮಾಹಿತಿಗಾಗಿ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಕೋರಿದ್ದಾರೆ. 

------ 

ಜಿಲ್ಲಾ ಪೊಲೀಸ್; ವಾರ್ಷಿಕ ಕ್ರೀಡಾಕೂಟ ಡಿ.01, 02ರಂದು 

ಬಳ್ಳಾರಿ,ನ.24:ಜಿಲ್ಲಾ ಪೊಲೀಸ್ ಇಲಾಖೆಯ ವಾರ್ಷಿಕ ಕ್ರೀಡಾಕೂಟಗಳು ಡಿ.01 ಮತ್ತು 02 ರಂದು ನಗರದ ಡಿಎಆರ್‌ನ ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ತಿಳಿಸಿದ್ದಾರೆ. 

ವಾರ್ಷಿಕ ಕ್ರೀಡಾಕೂಟಗಳ ಉದ್ಘಾಟನಾ ಸಮಾರಂಭ ಡಿ.01ರಂದು ಬೆಳಿಗ್ಗೆ 08 ಗಂಟೆಗೆ ನಡೆಯಲಿದ್ದು, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಉದ್ಘಾಟನೆ ಮಾಡುವರು. 

ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಭಾಗವಹಿಸುವರು. 

ವಾರ್ಷಿಕ ಕ್ರೀಡಾಕೂಟಗಳ ಸಮಾರೋಪ ಸಮಾರಂಭ ಡಿ.02ರಂದು ಸಂಜೆ 04.30 ಕ್ಕೆ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಬಳ್ಳಾರಿ ವಲಯ ಪೊಲೀಸ್ ಮಹಾನೀರೀಕ್ಷಕರಾದ ಬಿ.ಎಸ್‌.ಲೋಕೇಶ್ ಕುಮಾರ್ ಹಾಗೂ ಬಳ್ಳಾರಿ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಹೆಚ್ ಸೂರ್ಯವಂಶಿ ಅವರು ಭಾಗವಹಿಸುವರು. 

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೆ.ಪಿ.ರವಿಕುಮಾರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

------- 

ಅಂಚೆ ಇಲಾಖೆಯಿಂದ ಮನೆ ಬಾಗಿಲಿಗೆ ಜೀವನ ಪ್ರಮಾಣ ಪತ್ರ 

ಬಳ್ಳಾರಿ,ನ.24(:ಅಂಚೆ ಇಲಾಖೆಯಿಂದ ಇಂಡಿಯ ಪೋಸ್ಟ್‌ ಪೇಮೆಂಟ್ ಬ್ಯಾಂಕ್‌ನ ಮೂಲಕ ಪಿಂಚಣಿದಾರರ ಮನೆ ಬಾಗಿಲಿಗೆ ಜೀವನ ಪ್ರಮಾಣ ಪತ್ರ ನೀಡುತ್ತಿದೆ. 

ಪಿಂಚಣಿದಾರರು ನಿಮ್ಮ ಸಮೀಪದ ಅಂಚೆ ಕಚೇರಿಯ ಪೋಸ್ಟ್‌ಮ್ಯಾನ್ ಅವರನ್ನು ಸಂಪರ್ಕಿಸಿ ಕೇವಲ 70/- ರೂಪಾಯಿ ಪಾವತಿಸಿ ಜೀವನ ಪ್ರಮಾಣ ಪತ್ರ ಪಡೆಯಬಹುದಾಗಿದೆ. 

ಪೋಸ್ಟ್‌ ಇನ್ಫೋ ಅಪ್ಲಿಕೇಷನ್ ಮೂಲಕ ಕೋರಿಕೆಯನ್ನು ಸಲ್ಲಿಸಿದರೆ, ಸಂಬಂಧಿಸಿದ ಪೋಸ್ಟ್‌ಮ್ಯಾನ್‌ಗಳು ನಿಮ್ಮ ಮನೆ ಬಾಗಿಲಿಗೆ ಬಂದು ಡಿಜಿಟಲ್ ಜೀವನ ಪ್ರಮಾಣ ಪತ್ರ ನೀಡುತ್ತಾರೆ. ಇದಕ್ಕೆ ಯಾವುದೇ ಹೆಚ್ಚುವರಿ ಶುಲ್ಕ ಇರುವುದಿಲ್ಲ. ಹೆಚ್ಚಿನ ಮಾಹಿತಿಗೆ ಗ್ರಾಹಕರು ತಮ್ಮ ಸಮೀಪದ ಅಂಚೆ ಕಚೇರಿಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ವಿಭಾಗ ಅಂಚೆ ಅಧೀಕ್ಷಕ ವಿ.ಎಲ್‌.ಚಿತ್ತಕೋಟೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

--------- 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ: ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ 

ಬಳ್ಳಾರಿ,ನ.24:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2023-24ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಅನುಷ್ಟಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 

ವಿವಿಧ ಯೋಜನೆಗಳಾದ ಉದ್ಯೋಗಿನಿ ಯೋಜನೆ ಮತ್ತು ಚೇತನಾ ಯೋಜನೆ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಧನಶ್ರೀ ಯೋಜನೆ ಹಾಗೂ ಮಾಜಿ ದೇವದಾಸಿ ಪುನರ್ವಸತಿ ಯೋಜನೆಗಳಡಿ ಭೌತಿಕ ಮತ್ತು ಆರ್ಥಿಕ ಗುರಿ ನಿಗದಿ ಪಡಿಸಿದ್ದು, ಈ ಯೋಜನೆಗಳಿಗೆ ಮಹಿಳಾ ಫಲಾನುಭವಿಗಳು ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

ಅರ್ಜಿ ಸಲ್ಲಿಸಲು ಡಿ.22 ಕೊನೆಯ ದಿನವಾಗಿದೆ. 

ಉದ್ಯೋಗಿನಿ ಯೋಜನೆ: ಈ ಯೋಜನೆಯಡಿ ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತಿದೆ.  

ಚೇತನ ಯೋಜನೆ: ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ.30 ಸಾವಿರಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ.  

ಧನಶ್ರೀ ಯೋಜನೆ: ಹೆಚ್‌.ಐ.ವಿ. ಸೋಂಕಿತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ರೂ.30 ಸಾವಿರಗಳ ಪ್ರೋತ್ಸಾಹಧನ ನೀಡಲಾಗುತ್ತದೆ.  

ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ: ಲಿಂಗತ್ವ ಅಲ್ಪಸಂಖ್ಯಾತ ಫಲಾನುಭವಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ.30 ಸಾವಿರಗಳ ಪ್ರೋತ್ಸಾಹಧನ ನೀಡಲಾಗುತ್ತದೆ. 

ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ: ಈ ಯೋಜನೆಯಡಿ 1993-94 ಮತ್ತು 2007-08ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ.30 ಸಾವಿರಗಳ ಪ್ರೋತ್ಸಾಹಧನ ನೀಡಲಾಗುತ್ತದೆ. 

ಸೂಚನೆಗಳು: ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿರಬೇಕು. ಉದ್ಯೋಗಿನಿ ಯೋಜನೆಯ ಎಸ್‌ಸಿಎಸ್‌ಪಿ/ಟಿಎಸ್‌ಪಿ ಬಳಕೆಯಾದ ಅನುದಾನದಡಿ ಸೌಲಭ್ಯ ಪಡೆಯಲು ಇಚ್ಚಿಸುವ ಫಲಾಪೇಕ್ಷಿಗಳು/ ಅರ್ಜಿದಾರರು ಸೇವಾಸಿಂಧು ಪೋರ್ಟಲ್ ಣಣಠಿ:/ಜತಛಿಟಿಜಣ.ಞಚಿಡಿಟಿಚಿಣಚಿಞಚಿ.ರಠ.ಟಿ ಗೆ ಭೇಟಿ ನೀಡಬಹುದು. ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಚಿಸುವ ಫಲಾಪೇಕ್ಷಿಗಳು/ಅರ್ಜಿದಾರರು ಸಚಿವರು, ಶಾಸಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಇವರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದು. 

ಈ ಹಿಂದೆ ಮೇಲ್ಕಂಡ ಯೋಜನೆಗಳಡಿ ಸೌಲಭ್ಯ ಪಡೆದ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 

ಹೆಚ್ಚಿನ ಮಾಹಿತಿಗಾಗಿ ನಗರದ ಎಸ್‌.ಪಿ.ಸರ್ಕಲ್ ಹತ್ತಿರದ ಮಹಿಳಾ ಪೊಲೀಸ್ ಠಾಣೆ ಪಕ್ಕದಲ್ಲಿನ ಸ್ತ್ರೀಸೇವಾ ನಿಕೇತನ ಆವರಣದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧ ಇಲಾಖೆ ಹಾಗೂ ಮಹಿಳಾ ಅಭಿವೃದ್ಧಿ ನಿಗಮ ಕಚೇರಿಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್‌ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

-------- 

ನ.28ರಂದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಗಳು  

ಬಳ್ಳಾರಿ,ನ.24:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ 2023-24ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಗಳು ನ.28ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೋಟೆ ಪ್ರದೇಶದ ಸಂತಜಾನ್ ಪ್ರೌಢಶಾಲೆಯಲ್ಲಿ ನಡೆಯಲಿವೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಬಿ.ಉಮಾದೇವಿ ಅವರು ತಿಳಿಸಿದ್ದಾರೆ. 

ಯುವಜನ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಕಾರ್ಯಕ್ರಮ ಉದ್ಘಾಟಿಸುವರು ಮತ್ತು ಅಧ್ಯಕ್ಷತೆ ವಹಿಸುವರು. 

ಸಂಸದರಾದ ವೈ.ದೇವೇಂದ್ರ​‍್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಜೆ.ಎನ್‌.ಗಣೇಶ್, ಬಿ.ಎಂ.ನಾಗರಾಜ್, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ್ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಉಪಮೇಯರ್ ಬಿ.ಜಾನಕಿ, ಬಳ್ಳಾರಿ ವಲಯ ಪೊಲೀಸ್ ಮಹಾನೀರೀಕ್ಷಕರಾದ ಬಿ.ಎಸ್‌.ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ.ಎನ್, ಸಹಾಯಕ ಆಯುಕ್ತ ಹೇಮಂತ್ ಕುಮಾರ್ ಹಾಗೂ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 

ಈ ಸಂದರ್ಭದಲ್ಲಿ ಸಂತ ಜಾನರ ವಿದ್ಯಾಸಂಸ್ಥೆಯ ವ್ಯವಸ್ಥಾಪಕರು ಹಾಗೂ ಪತ್ರ ವ್ಯವಹಾರಾಧಿಕಾರಿಗಳಾದ ವಂದನೀಯ ಫಾದರ್ ವಾಲ್ಟೇರ್ ಮೆನೆಜೆಸ್, ಸಂತಜಾನರ ಪ್ರೌಢಶಾಲೆಯ ಮುಖ್ಯಗುರುಗಳಾದ ಶಾಂತುಶೀಲನ್, ಡಯಟ್‌ನ ಉಪನಿರ್ದೇಶಕಿ ಹನುಮಕ್ಕ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿಗಳು, ಡಯಟ್ ಉಪನ್ಯಾಸಕರು, ಜಿಲ್ಲಾ ದೈಹಿಕ ಶಿಕ್ಷಣ ಪರೀವೀಕ್ಷಕರು, ವಿಷಯ ಪರೀವೀಕ್ಷಕರು ಹಾಗೂ ಇತರರು ಉಪಸ್ಥಿತರಿರಲಿದ್ದಾರೆ. 

------- 

ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರೀಶೀಲನಾ ಸಭೆ ಡಿ.01ರಂದು 

ಬಳ್ಳಾರಿ,ನ.24:ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರೀಶೀಲನಾ ಸಭೆಯನ್ನು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ಡಿ.01ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ.  

-------- 

ಯುವಕ ಕಾಣೆ ನಾಪತ್ತೆ 

ಬಳ್ಳಾರಿ,ನ.24:ಬ್ರೂಸ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾಣಿಕ್‌ಲಾಲ್ ಎನ್ನುವ 23 ವರ್ಷದ ಯುವಕ ನ.16ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಅವರು ತಿಳಿಸಿದ್ದಾರೆ. 

ಕಾಣೆಯಾದ ಬಾಲಕನ ಚಹರೆ ಗುರುತು: ಎತ್ತರ 6 ಅಡಿ, ಕೋಲುಮುಖ, ಎಣ್ಣೆಗೆಂಪು ಮೈಬಣ್ಣ, ಕಪ್ಪು ತಲೆ ಕೂದಲು ಹೊಂದಿದ್ದು, ಕನ್ನಡ, ಹಿಂದಿ ಭಾಷೆ ಮಾತನಾಡುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಗ್ರೇ ಕಲರ್ ಟೀ ಶರ್ಟ್‌ ಮತ್ತು ಲೈಟ್ ಗ್ರೀನ್ ಕಲರ್ ಪ್ಯಾಂಟ್ ಧರಿಸಿರುತ್ತಾನೆ.  

ಮೇಲ್ಕಂಡ ಚಹರೆಯುಳ್ಳ ಯುವಕ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ಪಿ.ಎಸ್‌.ಐ ಮೊ.9480803081 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ ದೂ.083 


ಸುದ್ದಿ ಓದಿ